×
Ad

ದಾವಣಗೆರೆಗೆ ಇಂದು ಪ್ರಧಾನಿ ಮೋದಿ

Update: 2016-05-29 11:56 IST

ವಿಕಾಸ ಪರ್ವ ಕಾರ್ಯಕ್ರಮದಲ್ಲಿ ಭಾಗಿ

ದಾವಣಗೆರೆ, ಮೇ 29: ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ರವಿವಾರ ಹಮ್ಮಿಕೊಳ್ಳಲಾಗಿರುವ ವಿಕಾಸ ಪರ್ವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.

ಪ್ರಧಾನಿ ಮೋದಿ ಸಂಜೆ ನಾಲ್ಕು ಗಂಟೆಗೆ ಸಮಾರಂಭದಲ್ಲಿ ಭಾಗವಹಿಸಲಿದ್ದು, 1.5 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ್ ತಿಳಿಸಿದ್ದಾರೆ.

ಮೋದಿ ಸಮಾವೇಶದಲ್ಲಿ ಕೇಂದ್ರ ಸರಕಾರದ ಕಳೆದ ಎರಡು ವರ್ಷಗಳ ಸಾಧನೆಯನ್ನು ತಿಳಿಸಲಿದ್ದು, ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಬಿಜೆಪಿ ನಾಯಕರಾದ ಕೆಎಲ್ ಈಶ್ವರಪ್ಪ, ಪ್ರಹ್ಲಾದ್ ಜೋಶಿ,ಆರ್. ಅಶೋಕ್ ಸೇರಿದಂತೆ 2 ಸಾವಿರಕ್ಕೂ ಅಧಿಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಿದ್ದೇಶ್ವರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News