×
Ad

ಕೆಎಸ್ಸಾರ್ಟಿಸಿ ನಿರ್ದೇಶಕರಾಗಿ ಟಿ.ಕೆ.ಸುಧೀರ್ ನೇಮಕ

Update: 2016-05-29 16:18 IST

ಮಂಗಳೂರು, ಮೇ 29:ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಟಿ.ಕೆ.ಸುಧೀರ್ ಅವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಡಳಿಗೆ ನಿರ್ದೇಶಕರನ್ನಾಗಿ ಕರ್ನಾಟಕ ಸರಕಾರ ನೇಮಿಸಿದೆ.

ಶಾಸಕ ಜೆ.ಆರ್.ಲೋಬೊ ಅವರ ಶಿಫಾರಸಿನ ಮೇರೆಗೆ ಈ ನೇಮಕಾತಿ ಮಾಡಲಾಗಿದೆ. ಟಿ.ಕೆ ಸುಧೀರ್ ಪ್ರಸ್ತುತ ದ.ಕ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಭಾರತ ಸೇವಾದಳದ ಜಿಲ್ಲಾ ಕಾರ್ಯದರ್ಶಿಯಾಗಿಯೂ, ಹಲವಾರು ವರ್ಷಗಳ ಕಾಲ ಯುವಕಾಂಗ್ರೆಸ್‌ನ ಬ್ಲಾಕ್ ಅಧ್ಯಕ್ಷ ಮತ್ತು ಇನ್ನಿತರ ಪಧಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News