×
Ad

ಕೇರಳದ ಮಾಜಿ ಸಚಿವ ನಿಧನ

Update: 2016-05-30 23:34 IST

ಕೋಝಿಕೋಡ್, ಮೇ 30: ಕೇರಳದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಕೆ.ಪಿ.ನೂರುದ್ದೀನ್ ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.
ಅವರಿಗೆ 77 ವರ್ಷ ಪ್ರಾಯವಾಗಿತ್ತು. ನೂರುದ್ದೀನ್ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
ಕಳೆದವಾರ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದ್ದ ಅವರು ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ನೂರುದ್ದೀನ್ 1982-87ರಲ್ಲಿ ಕೆ.ಕರುಣಾಕರನ್‌ರ ಸಂಪುಟದಲ್ಲಿ ಸಚಿವರಾಗಿದ್ದರು.
ಅವರು 1977 ಹಾಗೂ 1991ರ ನಡುವೆ ಕಣ್ಣೂರು ಜಿಲ್ಲೆಯ ಪುರವೂರು ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News