ಕಡಬ: ಸೈಂಟ್ ಜೋಕಿಮ್ಸ್, ಸೈಂಟ್ ಆನ್ಸ್ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ
Update: 2016-05-30 23:50 IST
ಕಡಬ, ಮೇ 30: ಇಲ್ಲಿನ ಸೈಂಟ್ ಜೋಕಿಮ್ಸ್ ಹಾಗೂ ಸೈಂಟ್ ಆನ್ಸ್ ವಿದ್ಯಾಸಂಸ್ಥೆಯಲ್ಲಿ 2016-17ನೆ ಸಾಲಿನ ಶಾಲಾ ಪ್ರಾರಂಭೋತ್ಸವ ಸೋಮವಾರ ನಡೆಯಿತು.
ಸಂಸ್ಥೆಯ ಸಂಚಾಲಕ ರೆ.ಫಾ. ಮೈಕಲ್ ಲೋಬೊ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ವಿದ್ಯಾರ್ಜನೆ ಪಡೆದು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಬೇಕು ಎಂದರು.
ವಿದ್ಯಾರ್ಥಿಗಳು ಕಡಬ ಪೇಟೆ ಮೂಲಕ ಶಾಲೆಗೆ ಮೆರವಣಿಗೆಯಲ್ಲಿ ಆಗಮಿಸಿದರು. ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಪಾಲಕರು ಉಪಸ್ಥಿತರಿದ್ದರು.