ಇಬ್ಬರು ವೈದ್ಯ ವಿದ್ಯಾರ್ಥಿಗಳ ಬಂಧನ
Update: 2016-05-31 22:07 IST
ತೀರ್ಥಹಳ್ಳಿ, ಮೇ 31: ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳನ್ನು ಆಗುಂಬೆ ಠಾಣಾ ಪೊಲೀಸರು ಆಗುಂಬೆಯ ಘಾಟಿ ತಪಾಸಣಾ ಕೇಂದ್ರದಲ್ಲಿ ವಶಪಡಿಸಿಕೊಂಡಿದ್ದಾರೆ.
ಮಂಗಳೂರು ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ದಾವಣಗೆರೆ ಮೂಲದ ವಿಷ್ಣು (23), ಗೋವಾ ಮೂಲದ ಅನೀಶ್(23) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ 750 ಗ್ರಾಂ. ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಕಾಲೇಜು ಹಾಸ್ಟೆಲ್‌ಗೆ ಗಾಂಜಾವನ್ನು ಪೂರೈಸಲಾಗುತ್ತಿತ್ತು ಎಂದು ಆರೋಪಿಗಳು ಪೊಲೀಸ್ ತನಿಖೆಯಲ್ಲಿ ತಿಳಿಸಿದ್ದಾರೆ. ಆಗುಂಬೆ ಪಿಎಸ್ಸೈ ಮಂಜುನಾಥ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.