×
Ad

ಹರೇಕಳ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಪ್ರಾರಂಭೋತ್ಸವ

Update: 2016-06-01 18:57 IST

ಕೊಣಾಜೆ, ಜೂ.1: ಹರೇಕಳ ರಾಮಕೃಷ್ಣ ಪ್ರೌಢಶಾಲೆಯ ಪ್ರಾರಂಭೋತ್ಸವವು ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಮೆರವಣಿಗೆಯೊಂದಿಗೆ ನಡೆಯಿತು.

ಉದ್ಘಾಟನೆಯನ್ನು ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೆಬ್ಬೇಲಿ ಮನೋಜ್‌ಕುಮಾರ್ ಹೆಗ್ಡೆ ನೆರವೇರಿಸಿದರು. ಪಠ್ಯೇತರ ಚಟುವಟಿಕೆಗಳಲ್ಲಿ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟದ ಪುರಸ್ಕಾರ ಪಡೆದಿರುವುದು ಅಭಿನಂದನೀಯ. ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯ ಕೆ. ರವೀಂದ್ರ ರೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುವರ್ಣ ಮಹೋತ್ಸವ ಸಮಿತಿಯ ಕೋಶಾಧಿಕಾರಿ ಕಡೆಂಜ ಸೋಮಶೇಖರ ಚೌಟ ಭಾಗವಹಿಸಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಹತ್ತನೆ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿ ಅಕ್ಷತಾಳನ್ನು ಈ ಸಂದರ್ಭ ಗೌರವಿಸಲಾಯಿತು.

ಸೌಂದರ್ಯ ಮತ್ತು ಬಳಗ ಪ್ರಾರ್ಥನೆಗೈದರು. ಪ್ರಜ್ವಲ್ ಹಾಗೂ ನಿರೀಕ್ಷಾ ಭಾವಗೀತೆಯನ್ನು ಹಾಡಿದರು. ಅಧ್ಯಾಪಕ ರವಿಶಂಕರ್ ಸ್ವಾಗತಿಸಿದರು. ಶಿಕ್ಷಕಿ ಉಷಾಲತಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ತ್ಯಾಗಂ ಹರೇಕಳ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News