×
Ad

ತ.ನಾಡು: ಸಿಆರ್‌ಪಿಎಫ್ ಯೋಧನ ಆತ್ಮಹತ್ಯೆ

Update: 2016-06-01 21:59 IST

ಚೆನ್ನೈ,ಜೂ.1: ತೂತುಕುಡಿ ಜಿಲ್ಲೆಯ ಕಾವಳಪಿಟ್ಟಿ ಗ್ರಾಮದಲ್ಲಿ ಸಿಆರ್‌ಪಿಎಫ್ ಯೋಧನೋರ್ವ ಬುಧವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಜೆಯಲ್ಲಿ ಸ್ವಗ್ರಾಮಕ್ಕೆ ಮರಳಿದ್ದ ಹೆಡ್ ಕಾನ್‌ಸ್ಟೇಬಲ್ ಎಸ್.ಪಿ.ಸಿಂಗ್ ತನ್ನ ಕೋಣೆಯಲ್ಲಿ ಸತ್ತು ಬಿದ್ದಿದ್ದು, ನಸುಕಿನ ಮೂರು ಗಂಟೆಯ ವೇಳೆಗೆ ಈ ಘಟನೆ ಬೆಳಕಿಗೆ ಬಂದಿದೆ. ಸಿಂಗ್ 12ನೆ ಸಿಆರ್‌ಪಿಎಫ್ ಬಟಾಲಿಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಸ್ಥಳೀಯ ಪೊಲೀಸರು ಮತ್ತು ಹಿರಿಯ ಸಿಆರ್‌ಪಿಎಫ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆಯ ಕುರಿತು ಪ್ರಾಥಮಿಕ ವಿಚಾರಣೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News