×
Ad

ಬೆಳ್ತಂಗಡಿ: ಹೋಲಿ ರಿಡೀಮರ್ ಶಾಲೆಯ ವಿಸ್ತರಣಾ ಕಟ್ಟಡ ಉದ್ಘಾಟನೆ

Update: 2016-06-02 14:41 IST

ಬೆಳ್ತಂಗಡಿ, ಜೂ.2: ಇಂದಿನ ಮಕ್ಕಳು ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವ ರತ್ನಗಳು. ಆ ನಿಟ್ಟಿನಲ್ಲಿ ಅವರನ್ನು ತಯಾರಿಸುವ ಮಹತ್ತರವಾದ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ ಎಂದು ಮಂಗಳೂರು ಬಿಷಪ್ ಡಾ.ಅಲೋಶಿಯಸ್ ಪಾವ್ಲ್ ಡಿಸೋಜ ನುಡಿದರು. ಅವರು ಬೆಳ್ತಂಗಡಿಯ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿಸ್ತರಣಾ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು. ಎಲ್ಲರಿಗೂ ಶಿಕ್ಷಣ ದೊರೆತಾಗ ಉತ್ತಮ ಸಮಾಜ ನಿರ್ಮಾಣಗೊಳ್ಳಲು ಸಾಧ್ಯವಿದೆ. ಶಿಕ್ಷಣ ಸಮಸ್ಥೆಗಳು ಶಿಕ್ಷಕರು ಪೊಷಕರು ಒಟ್ಟಾಗಿ ಶ್ರಮಿಸಿದಾಗ ಉತ್ತಮ ವ್ಯಕ್ತಿಗಳನ್ನು ರೂಪಿಸಲು ಸಾಧ್ಯ ಎಂದರು. ಶಾಲಾ ಸಂಚಾಲಕ ವಂ.ಫಾ.ಬೊನವೆಂಚರ್ ನಝ್ರೆತ್ ಮಾತನಾಡಿ ನೂತನ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯ ವಂ ಫಾ.ಅನಿಲ್ ಪ್ರಕಾಶ್ ಡಿಸಿಲ್ವ ಶಾಲಾ ವರದಿಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಡಾ.ಅಲೋಶಿಯಸ್ ಪಾವ್ಲ್ ಡಿಸೋಜರವರು ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷರಾಗಿ ಯಶಸ್ವಿ ದ್ವಿದಶಕಗಳನ್ನು ಮತ್ತು ಜೀವನದ 75 ಸಂವತ್ಸರಗಳನ್ನು ಪೂರೈಸಿದ ಸುಸಂದರ್ಭದಲ್ಲಿ, ಹೋಲಿ ರಿಡೀಮರ್ ಪವಿತ್ರ ದೇವಾಲಯ ಹಾಗೂ ಶಿಕ್ಷಣ ಸಂಸ್ಥೆಗಳ ಪರವಾಗಿ ಅವರನ್ನು ಸನ್ಮಾನಿಸಲಾಯಿತು. ಶಾಲಾ ವಿಸ್ತರಣಾ ಕಟ್ಟಡ ನಿರ್ಮಿಸಲು ಸಹಕರಿಸಿದ ಎಂಜಿನಿಯರ್ ಹಾಗೂ ದಾನಿಗಳನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಅಲೋಶಿಯಸ್ ಲೋಬೊ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ವಿನ್ಸೆಂಟ್ ಟಿ.ಡಿಸೋಜ ಉಪಸ್ಥಿತರಿದ್ದರು. ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೋನ್ ಅರ್ವಿನ್ ಡಿಸೋಜ ಸನ್ಮಾನ ಪತ್ರವನ್ನು ವಾಚಿಸಿದರು. ಸಂಸ್ಥೆಯ ಶಿಕ್ಷಕ ವೃಂದದವರು ಅಭಿನಂದನಾ ಗೀತೆ ಹಾಡಿದರು. ಶಿಕ್ಷಕಿ ಏಂಜಲ್ ಮರಿಯಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಮೇರಿ ಸುಜಾ ಸ್ವಾಗತಿಸಿದರು. ಸರಿತಾ ವಿಲ್ಮಾ ರೊಡ್ರಿಗಸ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News