ಮಂಜೇಶ್ವರ ಶಾಸಕರಿಂದ ಕನ್ನಡದಲ್ಲಿ ಪ್ರಮಾಣವಚನ ಸ್ವೀಕಾರ

Update: 2016-06-02 12:11 GMT

ಕಾಸರಗೋಡು, ಜೂ. 2: ಕೇರಳ ವಿಧಾನಸಭಾ ಅಧಿವೇಶನದಲ್ಲಿ ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಮಂಜೇಶ್ವರ ಶಾಸಕ ಪಿ.ಬಿ. ಅಬ್ದುರ್ರಝಾಕ್ ಗಮನ ಸೆಳೆದರು.

ಪಿಣರಾಯಿ ವಿಜಯನ್ ನೇತೃತ್ವದ ನೂತನ ಸರಕಾರದ ಮೊದಲ ಅಧಿವೇಶನ ಗುರುವಾರ ಆರಂಭಗೊಂಡಿದ್ದು, ಮೊದಲ ದಿನ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.

ಮಂಜೇಶ್ವರ ಶಾಸಕರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕನ್ನಡದ ಮೇಲಿನ ಅಭಿಮಾನವನ್ನು ಎತ್ತಿ ತೋರಿಸಿದರು. 140 ಶಾಸಕರ ಪೈಕಿ ಪಿ.ಬಿ.ಅಬ್ದುರ್ರಝಾಕ್ ಮಾತ್ರ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 2011ರಲ್ಲೂ ಅವರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು.

ಉಳಿದ ಶಾಸಕರು ಮಲಯಾಳ ಮತ್ತು ಇಂಗ್ಲೀಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಹಂಗಾಮಿ ಸ್ಪೀಕರ್ ಎಸ್. ಶರ್ಮ ಪ್ರತಿಜ್ಞಾವಿಧಿ ಬೋಧಿಸಿದರು. ಮೇ 16 ರಂದು ನಡೆದ ಚುನಾವಣೆಯಲ್ಲಿ ಅಬ್ದುರ್ರಝಾಕ್ ಎರಡನೆ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News