ಜೂ.3ರಂದು ಕಂದಾಯ ಇಲಾಖೆಯಿಂದ ಅಹವಾಲು ಸ್ವೀಕಾರ
Update: 2016-06-02 20:31 IST
ಮಂಗಳೂರು, ಜೂ. 2: ರಾಜ್ಯ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಪ್ರಮೋದ್ ಮಧ್ವರಾಜ್ ಅವರು ದ.ಕ. ಜಿಲ್ಲಾ ಪ್ರವಾಸ ಕಾರ್ಯಕ್ರಮದ ಅಂಗವಾಗಿ ಜೂನ್3ರಂದು ಮಧ್ಯಾಹ್ನ 3 ಗಂಟೆಯಿಂದ ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ವಿಷಯಗಳಿಗೆ ಸಂಬಂಧಿಸಿ ಸಾರ್ವಜನಿಕರಿಗೆ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಜಿಲ್ಲೆಯ ಕಂದಾಯ ಇಲಾಖೆಯ ವಿವಿಧ ವಿಷಯಗಳಿಗೆ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಸಾರ್ವಜನಿಕರು ಇತ್ಯರ್ಥವಾಗದೆ ಬಾಕಿ ಉಳಿದಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಯೋಜನೆಯಡಿ ನೀಡಲಾಗುವ ಪಿಂಚಣಿಗಳು, ಅಂತ್ಯ ಸಂಸ್ಕಾರ, 94-ಸಿ ಅರ್ಜಿಗಳು, 11-ಇ ನಕ್ಷೆ, ಸರ್ವೆ, ಪೋಡಿ, ಆರ್‌ಟಿಸಿ ಸಮಸ್ಯೆಗಳು ಮೊದಲಾದ ಕಂದಾಯ ಇಲಾಖೆಯ ವಿಷಯಗಳಿಗೆ ಸಂಬಂಧಿಸಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.