×
Ad

ಭಟ್ಕಳ: ಮನೆಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ನಷ್ಟ

Update: 2016-06-03 18:03 IST

ಭಟ್ಕಳ, ಜೂ. 3: ಇಲ್ಲಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಜಾದ್‌ನಗರ 2ನೆ ಕ್ರಾಸ್ ಹನುಮಾನ್ ನಗರ ಸಮೀಪ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಶುಕ್ರವಾರ ನಡೆದಿದೆ.

ಮೊಯ್ದೀನ್ ಕಾರಡಗಿ ಎಂಬುವರ ಬಾಡಿಗೆ ಮನೆ ಬೆಂಕಿಗಾಹುತಿಯಾಗಿದೆ. ಆಕಸ್ಮಿಕ ಬೆಂಕಿಯಿಂದ ಮನೆಯಲ್ಲಿದ್ದ ಪಾತ್ರೆ, ದಿನಸಿ ಸಾಮಾನುಗಳು, ವಿದ್ಯುತ್ ಉಪಕರಣಗಳು, ಟೇಬಲ್, ಕುರ್ಚಿ ಸೇರಿದಂತೆ ಎಲ್ಲಾ ವಸ್ತುಗಳು ಸುಟ್ಟುಹೋಗಿದ್ದು ಸುಮಾರು 4ಲಕ್ಷ ರೂ. ನಷ್ಟ ಉಂಟಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಹಾನಿಯನ್ನು ತಪ್ಪಿಸಿದರು.

ಬೆಂಕಿ ತಗುಲಿದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಬೆಂಕಿಗೆ ಕಾರಣವೂ ತಿಳಿದುಬಂದಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News