×
Ad

ನಿವೃತ್ತ ಪ್ರೊಫೆಸರ್ ಲೋಹಾನಿ

Update: 2016-06-03 18:23 IST

ಭಟ್ಕಳ, ಜೂ. 3: ಇಲ್ಲಿನ ಪ್ರತಿಷ್ಠಿತ ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ಸುಮಾರು 38 ವರ್ಷಗಳ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 2011ರಲ್ಲಿ ಸೇವೆಯಿಂದ ನಿವೃತ್ತರಾದ ಪ್ರೊ. ಲೋಹಾನಿ(65) ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

ಪ್ರೊ. ಲೊಹಾನಿ ಭಟ್ಕಳದಲ್ಲಿ ಇತಿಹಾಸ ಉಪನ್ಯಾಸಕರಾಗಿದ್ದು, ಉರ್ದು ಸಾಹಿತ್ಯಕ್ಕೆ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ಉರ್ದು ಮತ್ತು ಆಂಗ್ಲ ಭಾಷೆಯಲ್ಲಿ ಹಿಡಿತ ಸಾಧಿಸಿದ್ದ ಅವರು, ಸಾಲಾರ್ ದೈನಿಕ ಹಾಗೂ ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿ ಫ್ರಿಲಾನ್ಸ್ ಜರ್ನಲಿಸ್ಟ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಭಟ್ಕಳದಲ್ಲಿ ಅಂಜುಮನ್ ತರಖ್ಖಿ ಉರ್ದು ಸಂಸ್ಥೆಯ ಸ್ಥಾಪಕರಾಗಿ ಹಲವು ಸಂಘಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘ, ಜಮಾಅತೆಇಸ್ಲಾಹಿ ಹಿಂದ್ ಸಂಘಟನೆಯಲ್ಲೂ ಸಕ್ರಿಯರಾಗಿದ್ದರು.

ಇವರ ನಿಧನಕ್ಕೆ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಬ್ದುಲ್‌ರಹೀಮ್ ಜುಕಾಕೋ, ಭಟ್ಕಳ ಜಮಾಅತೆ ಇಸ್ಲಾಮಿ ಹಿಂದ್‌ ಅಧ್ಯಕ್ಷ ಮುಜಾಹಿದ್ ಮುಸ್ತಫಾ, ಅಂಜುಮನ್ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಮುಲ್ಲಾ, ವಿಶ್ರಾಂತ ಪ್ರಾಂಶುಪಾಲ ಡಾ.ಸೈಯದ್ ಝಮಿರುಲ್ಲಾ ಷರೀಫ್, ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್, ಉಪಾಧ್ಯಕ್ಷ ಎಂ.ಆರ್.ಮಾನ್ವಿ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News