ಅನುಮಾನಾಸ್ಪದ ವ್ಯಕ್ತಿಯ ಬಂಧನ
Update: 2016-06-03 23:38 IST
ಉಡುಪಿ, ಜೂ.3: ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಮೊಬೈಲ್ ರೆನ್ ಅಂಗಡಿಯ ಎದುರು ಜೂ.3ರಂದು ಬೆಳಗಿನ ಜಾವ 4 ಗಂಟೆಗೆ ಅನುಮಾಸ್ಪದವಾಗಿ ನಿಂತಿದ್ದ ಓರ್ವ ನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ದುರ್ಗಪ್ಪ ದುರ್ಮುರ್ಗಿ(31) ಎಂದು ಗುರುತಿಸಲಾಗಿದೆ. ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಮೊಬೈಲ್ ಅಂಗಡಿ ಎದುರು ನಿಂತಿದ್ದ ಈತ ಪೊಲೀಸ್ ಜೀಪು ಕಂಡು ಓಡಲು ಯತ್ನಿಸಿದನು. ಬಳಿಕ ಪೊಲೀಸ್ ಸಿಬ್ಬಂದಿ ಆತನನ್ನು ಬೆನ್ನಟ್ಟಿ ಹಿಡಿದು ವಶಕ್ಕೆ ತೆಗೆದುಕೊಂಡರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.