ಕಾರು ಢಿಕ್ಕಿ: ಪಾದಚಾರಿ ಮೃತ್ಯು
Update: 2016-06-03 23:43 IST
ಉಡುಪಿ, ಜೂ.3: ಪುತ್ತೂರು ಎಲ್‌ವಿಟಿ ದೇವಸ್ಥಾನದ ಬಳಿಯ ಚವರ್‌ಲೆಟ್ ಶೋರೂಮ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜೂ.2ರಂದು ಸಂಜೆ 5:30ಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಸಂತೆಕಟ್ಟೆ ಅಬ್ಬಣ್ಣ ಕುದ್ರುವಿನ ಗಿರಿಜಾ ಪೂಜಾರ್ತಿ ಮೃತಪಟ್ಟಿದ್ದಾರೆ.
ಸಂತೆಕಟ್ಟೆ ಕಡೆಯಿಂದ ಅಂಬಾಗಿಲು ಕಡೆಗೆ ಹೋಗುತ್ತಿದ್ದ ಕಾರು ರಸ್ತೆ ದಾಟಲು ನಿಂತುಕೊಂಡಿದ್ದ ಗಿರಿಜಾಗೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯುವಾಗ ಮೃತಪಟ್ಟಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.