ಅರ್ಜಿ ಆಹ್ವಾನ
Update: 2016-06-03 23:44 IST
ಉಡುಪಿ, ಜೂ.3: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 2016-17ನೆ ಸಾಲಿಗೆ 7 ಮತ್ತು 8ನೆ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳಿಗೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಜೂ.10ರೊಳಗೆ ಅರ್ಜಿ ಸಲ್ಲಿಸಬಹುದು. ಕಾರ್ಕಳ, ಓಂತಿಬೆಟ್ಟು, ಆರೂರು, ಕೋಟೇಶ್ವರ ಮತ್ತು ಬೈಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಅರ್ಜಿಗಳು ಲಭ್ಯವಿದ್ದು, ಜೂ.15ರಂದು ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.