×
Ad

ತೇಜೋವಧೆ ಆರೋಪ-ಸುದ್ದಿವಾಹಿನಿ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಆಗ್ರಹ

Update: 2016-06-03 23:55 IST

ಬೆಂಗಳೂರು, ಜೂ. 3: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷವೊಂದರ ಅಭ್ಯರ್ಥಿಗೆ ಮತ ನೀಡಲು ಕೋಟ್ಯಂತರ ರೂ.ಬೇಡಿಕೆಯಿಟ್ಟ ಕುಟುಕು ಕಾರ್ಯಾಚರಣೆ ನೆಪದಲ್ಲಿ ರಾಷ್ಟ್ರೀಯ ಸುದ್ದಿವಾಹಿನಿ ತನ್ನ ತೇಜೋವಧೆ ಮಾಡಿದೆ ಎಂದು ಆರೋಪಿಸಿ ಆಳಂದ ಕ್ಷೇತ್ರದ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್ ವಿಧಾನಸೌಧದಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.

ಶುಕ್ರವಾರ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿನ ಕೆಂಗಲ್ ಹನುಮಂತಯ್ಯ ಪುತ್ಥಳಿ ಸಮೀಪ ಕೈಗೆ ಕಪ್ಪುಪಟ್ಟಿ ಧರಿಸಿ ಸುಡು ಬಿಸಿಲಿನಲ್ಲೆ ವೌನ ಧರಣಿ ಸತ್ಯಾಗ್ರಹ ನಡೆಸಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ಧರಾಮಯ್ಯನವರನ್ನು ಭೇಟಿ ಮಾಡಿ ಈ ಬಗ್ಗೆ ಕೂಡಲೇ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಮಾನನಷ್ಟ ಮೊಕದ್ದಮೆ: ಕುಟುಕು ಕಾರ್ಯಾಚರಣೆ ನೆಪದಲ್ಲಿ ರಾಷ್ಟ್ರೀಯ ಸುದ್ದಿವಾಹಿನಿ ತನ್ನ ಚಾರಿತ್ರ್ಯವಧೆ ಮಾಡಿದೆ. 1974ರಿಂದ ಸಾರ್ವಜನಿಕ ಜೀವನದಲ್ಲಿದ್ದು, ತತ್ವ-ಸಿದ್ಧಾಂತಗಳನ್ನಿಟ್ಟುಕೊಂಡು ತಾನು ರಾಜಕಾರಣದಲ್ಲಿ ಜನಸೇವೆ ಮಾಡುತ್ತಿದ್ದೇನೆ. ವಾಹಿನಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಿದ್ಧತೆ ನಡೆಸಿದ್ದೇನೆ ಎಂದು ಹೇಳಿದರು.ುಟುಕು ಕಾರ್ಯಾಚರಣೆ ನಡೆಸಿದ ರಾಷ್ಟ್ರೀಯ ಸುದ್ದಿವಾಹಿನಿ ಯವರಿಗೆ ಧೈರ್ಯವಿದ್ದರೆ ಎಲ್ಲ ವಿವರಗಳನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ ಬಿ.ಆರ್.ಪಾಟೀಲ್, ತಾನು ಎಲ್ಲ ರೀತಿಯ ತನಿಖೆಗೂ ಸಿದ್ಧ. ಹೀಗಾಗಿ ರಾಜ್ಯ ಸರಕಾರ ಸೂಕ್ತ ತನಿಖೆಗೆ ಆದೇಶಿಸಬೇಕೆಂದು ಮನವಿ ಮಾಡಿದರು.ಂದು ಹಂತದಲ್ಲಿ ತೀವ್ರ ಭಾವೋದ್ವೇಗಕ್ಕೆ ಒಳಗಾದ ಬಿ.ಆರ್.ಪಾಟೀಲ್, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಮ್ಮುಖದಲ್ಲೇ ಪತ್ರಕರ್ತರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಅಲ್ಲದೆ, ಈ ಪ್ರಕರಣವನ್ನು ನಾವು ಇಲ್ಲಿಗೇ ಬಿಡುವುದಿಲ್ಲ ಎಂದು ಕಿಡಿಗಾರಿದರು.ಹಂತದಲ್ಲಿ ಮಧ್ಯೆ ಪ್ರವೇಶಿಸಿದ ಮುಖ್ಯಮಂತ್ರಿ ಸಿದ್ಧರಾ ಮಯ್ಯ, ಕುಟುಕು ಕಾರ್ಯಾಚರಣೆ ಸಂಬಂಧ ಸೂಕ್ತ ತನಿಖೆ ಮಾಡಿ ಸೋಣ. ಪಾಟೀಲ್ ನಿನ್ನ ಬಗ್ಗೆ ಏನೇ ಆರೋಪ ಮಾಡಿದರೂ ಅದನ್ನು ಜನ ನಂಬೋದಿಲ್ಲ. ಬೇಸರಪಟ್ಟು ಕೊಳ್ಳಬೇಡ. ಭಾವೋ ದ್ವೇಗಕ್ಕೆ ಒಳಗಾಗಬೇಡ ಎಂದು ಸಮಾಧಾನ ಪಡಿಸಿದರು.


 ಸಿಬಿಐ ತನಿಖೆಗೆ ಶಾಸಕ ಎಚ್.ಡಿ.ರೇವಣ್ಣಆಗ್ರಹ

ಬೆಂಗಳೂರು, ಜೂ. 3: ರಾಜ್ಯಸಭೆ ಚುನಾವಣೆಯಲ್ಲಿ ಮತ ಹಾಕಲು ಶಾಸಕರು ಬೇಡಿಕೆಯಿಟ್ಟಿದ್ದಾರೆಂಬ ಸುದ್ದಿವಾಹಿನಿ ಯೊಂದರ ಕುಟುಕು ಕಾರ್ಯಾಚರಣೆಯ ಬಗ್ಗೆ ಚುನಾವಣಾಆಯೋಗ ಕೂಡಲೇ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆಗ್ರಹಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗ ಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಕೋಟ್ಯಂತರ ರೂ.ಜನ ಸಾಮಾನ್ಯರ ತೆರಿಗೆ ಹಣವನ್ನು ಬಿಡುಗಡೆ ಮಾಡುವ ಆಮಿಷವೊಡ್ಡಿದ್ದರೂ, ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆ ಎಂದು ದೂರಿದರು.ೆಡಿಎಸ್ ಮುಗಿಸುವ ಭ್ರಮೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರಿದ್ದು, ಜನತೆಯ ಆಶೀರ್ವಾದ ಇರುವ ವರೆಗೂ ಈ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ ಎಂದು ಗುಡುಗಿದ ರೇವಣ್ಣ, ರಾಜ್ಯಸಭೆ ಮೂರನೆ ಅಭ್ಯರ್ಥಿ ಗೆಲುವಿಗೆ ಸಚಿವರೊಬ್ಬರು ಬಿಎಸ್‌ವೈ ಮನೆ ಬಾಗಿಲು ತಟ್ಟುತ್ತಿದ್ದಾರೆಂದು ಗಂಭೀರ ಆರೋಪ ಮಾಡಿದರು.
ಶಾಸಕ ಝಮೀರ್ ಅಹ್ಮದ್ ಅವರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ವಿಶೇಷ ಒಲವು ಇದ್ದರೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿ ಎಂದು ಸಲಹೆ ಮಾಡಿದ ರೇವಣ್ಣ, ಜೂ.12ರ ನಂತರ ಭಿನ್ನಮತೀಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪರೋಕ್ಷ ಎಚ್ಚರಿಕೆ ನೀಡಿದರು.


ರಾಜೀನಾಮೆ ನೀಡಲಿ: ಹಾಸನ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಮೀಸಲಾತಿ ಪ್ರಕಟಣೆಯಲ್ಲಿ ಕಾನೂನು ಉಲ್ಲಂ ಘಿಸಲಾಗಿದೆ. ಆ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಎಚ್.ಕೆ.ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ರೇವಣ್ಣ ಆಗ್ರಹಿಸಿದರು. ತನ್ನ ಪತ್ನಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂಬುದು ನಮ್ಮ ಆಗ್ರಹ ವಲ್ಲ. ಪರಿಶಿಷ್ಟ ಜಾತಿಗೆ ಕಳೆದ 30 ವರ್ಷಗಳಿಂದ ಹಾಸನ ಜಿ.ಪಂ. ಮೀಸಲಾತಿ ದೊರೆತಿಲ್ಲ. ಆ ಹಿನ್ನೆಲೆಯಲ್ಲಿ ಹೋರಾಟಮಾಡುವುದು ತಪ್ಪೇ ಎಂದು ರೇವಣ್ಣ ಪ್ರಶ್ನಿಸಿದರು.

ಕಾಂಗ್ರೆಸ್ ಶಾಸಕರು ಭಾಗಿಯಾಗಿಲ್ಲ: ಡಾ.ಜಿ.ಪರಮೇಶ್ವರ್

ಬೆಂಗಳೂರು, ಜೂ.3: ರಾಜ್ಯಸಭಾ ಚುನಾವಣೆಯಲ್ಲಿ ವೋಟಿಗಾಗಿ ನೋಟು ಪ್ರಕರಣ ನಡೆಯುತ್ತಿರುವ ಕುರಿತು ಮಾಧ್ಯಮ ಗಳ ಮೂಲಕ ಗಮನಿಸಿದ್ದೇನೆ. ಆದರೆ, ಈ ಪ್ರಕ್ರಿಯೆಯಲ್ಲಿ ನಮ್ಮ ಪಕ್ಷದ ಯಾವೊಬ್ಬ ಶಾಸಕರು ಭಾಗಿಯಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.


ಶುಕ್ರವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆ ಚುನಾವಣೆ ಯಲ್ಲಿ ಸ್ಪರ್ಧಿಸುತ್ತಿರುವ ಯಾವ ಅಭ್ಯರ್ಥಿಗಳು ಶಾಸಕರಿಗೆ ಆಮಿಷವೊಡ್ಡಿಲ್ಲ. ಪಕ್ಷೇತರರು ನಮಗೆ ಬೆಂಬಲ ನೀಡಲು ಮುಂದಾಗಿದ್ದಾರೆ ಎಂದರು.ಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳ ಗೆಲುವಿಗೆ ಅಗತ್ಯವಿರುವ ಮತಗಳಿಗಿಂತ ಹೆಚ್ಚುವರಿಯಾಗಿ 31 ಮತಗಳು ನಮ್ಮ ಬಳಿಯಿವೆ. ಈ ಹಿನ್ನೆಲೆಯಲ್ಲಿ ಮೂರನೆ ಅಭ್ಯರ್ಥಿಗೆ ಪಕ್ಷೇತರ ಸದಸ್ಯರು ಬೆಂಬಲ ನೀಡಲು ಮುಂದೆ ಬಂದಿದ್ದಾರೆ ಎಂದು ಪರಮೇಶ್ವರ್ ಹೇಳಿದರು.
ನಮ್ಮ ಅಭ್ಯರ್ಥಿಗೆ ಬೇರೆ ಪಕ್ಷದ ಸದಸ್ಯರು ಸೈದ್ಧಾಂತಿಕವಾಗಿ ಬೆಂಬಲ ನೀಡಬಹುದು. ಆದರೆ, ನಮ್ಮ ಪಕ್ಷದಿಂದ ಯಾವುದೆ ರೀತಿಯ ಕುದುರೆ ವ್ಯಾಪಾರ ನಡೆದಿಲ್ಲ, ಅದಕ್ಕೆ ಅವಕಾಶವನ್ನು ನೀಡುವುದಿಲ್ಲ. ಪಕ್ಷೇತರ ಶಾಸಕರ ಕ್ಷೇತ್ರಾಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದರೆ ತಪ್ಪೇನು ಎಂದು ಅವರು ಪ್ರಶ್ನಿಸಿದರು.
ರಾಜ್ಯಸಭೆ ಚುನಾವಣೆಯಲ್ಲಿ ಮೂರನೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಹೈಕಮಾಂಡ್ ಜೊತೆ ಚರ್ಚೆ ಮಾಡಿಯೆ ತೀರ್ಮಾನ ಕೈಗೊಳ್ಳಲಾಗಿದೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಪರಮೇಶ್ವರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News