ಮೋದಿಗೆ ಅಫ್ಘಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ
Update: 2016-06-04 19:26 IST
ಹೆರಾತ್, ಜೂ. 4: ಅಫ್ಘಾನಿಸ್ತಾನಕ್ಕೆ ಶನಿವಾರ ಕ್ಷಿಪ್ರ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಗೆ ಆ ದೇಶದ ಅತ್ಯುನ್ನತ ನಾಗರಿಕ ಗೌರವವಾಗಿರುವ ಅಮೀರ್ ಅಮಾನುಲ್ಲಾ ಖಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಅಫ್ಘಾನ್-ಭಾರತ ಸ್ನೇಹ ಅಣೆಕಟ್ಟಿನ ಉದ್ಘಾಟನೆಯ ಬಳಿಕ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಪ್ರಶಸ್ತಿ ಪ್ರದಾನ ಮಾಡಿದರು.
‘‘ನೈಜ ಭ್ರಾತೃತ್ವವನ್ನು ಗೌರವಿಸಲಾಗಿದೆ. ಪ್ರಧಾನಿಗೆ ಅಫ್ಘಾನಿಸ್ತಾನದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿರುವ ಅಮೀರ್ ಅಮಾನುಲ್ಲಾ ಖಾನ್ ಪ್ರಶಸ್ತಿಯನ್ನು ನೀಡಲಾಗಿದೆ’’ ಎಂದು ವಿದೇಶ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ.