×
Ad

ಸ್ಕೌಟ್ಸ್, ಗೈಡ್ಸ್‌ನಿಂದ ಜಿಲ್ಲಾಧಿಕಾರಿಗೆ ಬೀಳ್ಕೊಡುಗೆ

Update: 2016-06-04 22:20 IST

ಮಡಿಕೇರಿ ಜೂ.4: ಕೊಡಗು ಜಿಲ್ಲಾಧಿಕಾರಿಯಾಗಿ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾಧ್ಯಕ್ಷರಾಗಿ ಇತ್ತೀಚೆಗೆ ನಿವೃತ್ತರಾದ ಮೀರ್ ಅನೀಸ್ ಅಹ್ಮದ್ ಅವರನ್ನು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಕೊಡಗು ಜಿಲ್ಲಾ ಸಂಸ್ಥೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಭ ಹಾರೈಸುವುದರ ಮೂಲಕ ಆತ್ಮೀಯವಾಗಿ ಬೀಳ್ಗೊಡಲಾಯಿತು.

ಈ ಸಂದರ್ಭದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಬಿ.ಕಾಳಪ್ಪ, ಸ್ಕೌಟ್ಸ್‌ನ ಆಯುಕ್ತರಾದ ಜಿಮ್ಮಿ ಸಿಕ್ವೇರಾ, ಖಜಾಂಚಿ ಸೋಮಯ್ಯ, ಜಿಲ್ಲಾ ಸಂಘಟಕರಾದ ಯು.ಸಿ. ದಮಯಂತಿ ಮತ್ತಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News