ಉಡುಪಿ ಹೋಬಳಿ ಮಟ್ಟದ ಕೃಷಿ ಅಭಿಯಾನಕ್ಕೆ ಚಾಲನೆ
ಉಡುಪಿ, ಜೂ.4: ಉಡುಪಿ ಜಿಪಂ ಕೃಷಿ ಮತ್ತು ಕೃಷಿ ಸಂಬಂತ ಇಲಾಖೆಗಳ ಸಹಯೋಗದಲ್ಲಿ ಉಡುಪಿ ಹೋಬಳಿ ಮಟ್ಟದ ಕೃಷಿ ಅಭಿಯಾನ ‘ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಶನಿವಾರ ಹಿರೇಬೆಟ್ಟು ನೆಲ್ಲಿಕಟ್ಟೆ ಶ್ರೀ ಆರ್ಯುದುರ್ಗಾ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಮಾತನಾಡಿ, ದೇಶದಲ್ಲಿ ಶೇ.58ರಷ್ಟು ಮಂದಿ ಕೃಷಿಯನ್ನು ಅವಲಂಬಿಸಿದ್ದಾರೆ. ದೇಶಕ್ಕೆ ಶೇ.35ರಷ್ಟು ವರಮಾನ ಕೃಷಿಯಿಂದ ಬರುತ್ತಿದೆ. ಪ್ರಕೃತಿಯನ್ನು ನಾವು ರಕ್ಷಿಸಿದರೆ ನಮ್ಮನ್ನು ಪ್ರಕೃತಿ ರಕ್ಷಿಸುತ್ತದೆ. ಮಕ್ಕಳ ಜನ್ಮದಿನವನ್ನು ಗಿಡ ನೆಡುವ ಮೂಲಕ ಆಚರಿಸುವ ಪರಿಪಾಠವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದರು.
ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ್ ಪಡುಬಿದ್ರೆ ಅಭಿಯಾನದ ಪೋಸ್ಟರ್ ಹಾಗೂ ಹಿರಿಯಡ್ಕ ಜಿಪಂ ಸದಸ್ಯೆ ಚಂದ್ರಿಕಾ ಜೆ. ಕೃಷಿ ಸಂಬಂಸಿದ ಕಿರು ಹೊತ್ತಿಗೆಯನ್ನು ಬಿಡು ಗಡೆ ಗೊಳಿಸಿದರು. ಅಧ್ಯಕ್ಷತೆಯನ್ನು ಆತ್ರಾಡಿ ಗ್ರಾಪಂ ಅಧ್ಯಕ್ಷೆ ಪ್ರಮೀಳಾ ಆರ್.ಶೆಟ್ಟಿಗಾರ್ ವಹಿಸಿದ್ದರು.
ತಾಪಂ ಉಪಾಧ್ಯಕ್ಷ ರಾಜೇಂದ್ರ ಪಿ., ಜಿಪಂ ಸದಸ್ಯ ವಿಲ್ಸನ್ ಹೆರಾಲ್ಡ್ ರೊಡ್ರಿಗಸ್, ತಾಪಂ ಸದಸ್ಯರಾದ ಸಂಧ್ಯಾ ಎಸ್.ಶೆಟ್ಟಿ, ರಜನಿ ಅಂಚನ್, ಶರ್ಮಿಳಾ ಮಾಧವ ಪೂಜಾರಿ, ಸಂಧ್ಯಾ ಕಾಮತ್, ಲಕ್ಷ್ಮೀನಾರಾಯಣ ಪ್ರಭು, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಸುಭಾಷಿತ್ ಕುಮಾರ್, ಬ್ರಹ್ಮಾವರ ವಲಯ ಕೃಷಿ ಸಂಶೋಧನಾ ಕೇಂದಗ್ರದ ಸಹ ಸಂಶೋಧನಾ ನಿರ್ದೇಶಕ ಡಾ.ಎಂ.ಹನುಮಂತಪ್ಪ, ಗಾಯತ್ರಿದೇವಿ ಉಪಸ್ಥಿತರಿದ್ದರು.
ಈ ಸಂದರ್ಭ ಕೃಷಿ ಯಂತ್ರೋಪಕರಣ ಹಾಗೂ ತೆಂಗಿನ ಸಸಿಗಳನ್ನು ವಿತರಿಸಲಾಯಿತು. ಉಡುಪಿ ಸಹಾಯಕ ಕೃಷಿ ನಿರ್ದೇಶಕ ಮೋಹನ್ ರಾಜ್ ಸ್ವಾಗತಿಸಿದರು. ಜಂಟಿ ಕೃಷಿ ನಿರ್ದೇಶಕ ಚಂದ್ರಶೇಖರ್ ನಾಯ್ಕಾ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಂತ್ರಿಕ ಅಕಾರಿ ಸತೀಶ್ ಬಿ. ಕಾರ್ಯಕ್ರಮ ನಿರೂಪಿಸಿದರು.