ಇಂದು ವಿಶ್ವ ಪರಿಸರ ದಿನಾಚರಣೆ
Update: 2016-06-05 00:07 IST
ಸುಳ್ಯ, ಜೂ.3: ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಜೂ.5ರಂದು ಸುಳ್ಯದಲ್ಲಿ ಸ್ವರ್ಣ ಸುಳ್ಯ-ಸ್ವಚ್ಛ ಸುಳ್ಯ ಸ್ವಚ್ಛತಾ ಅಭಿಯಾನವನ್ನು ನಡೆಸಲಾಗುವುದು ಎಂದು ಅಕಾಡಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಹೇಳಿದರು. ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣ ಪಂಚಾಯತ್, ಕೆ.ವಿ.ಜಿ. ಸಮೂಹ ಸಂಸ್ಥೆಗಳು, ಧರ್ಮಸ್ಥಳ ಸ್ವಸಹಾಯ ಸಂಘ ಸೇರಿದಂತೆ ವಿವಿಧ ಸಂಘಸಂಸ್ಥೆಗಳನ್ನು ಸೇರಿಸಿಕೊಂಡು ಸ್ವಚ್ಛತಾ ಆಂದೋಲನ ನಡೆಸಲಾಗುವುದು. ಬೆಳಗ್ಗೆ 9:30ಕ್ಕೆ ಸುಳ್ಯ ಶಾಸ್ತ್ರಿ ವೃತ್ತದಲ್ಲಿ ಕಾರ್ಯಕ್ರಮಕ್ಕೆ ಸಂಸದ ನಳಿನ್‌ಕುಮಾರ್ ಕಟೀಲ್ ಚಾಲನೆ ನೀಡುವರು ಎಂದು ಹೇಳಿದರು. ಪಪಂ ಅಧ್ಯಕ್ಷ ಪ್ರಕಾಶ್ ಹೆಗ್ಡೆ, ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಕೆ.ಸಿ.ಅಕ್ಷಯ್, ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷ ಸುಬೋದ್ ಶೆಟ್ಟಿ ಮೇನಾಲ, ನಗರ ಬಿಜೆಪಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.