‘ಜಲಸಾಕ್ಷರತೆ ಎಳೆಯದರಲ್ಲೇ ಸಿಗುವಂತಾಗಲಿ’
Update: 2016-06-05 00:13 IST
ಮಣಿಪಾಲ, ಜೂ.4: ಶಾಲಾ ಪಠ್ಯದಲ್ಲೇ ಜಲ ಸಾಕ್ಷರತೆ ವಿಚಾರಗಳನ್ನು ತಿಳಿಸಿದಲ್ಲಿ ಮುಂದಿನ ದಿನಗಳಲ್ಲಿ ಈ ಸಮಸ್ಯೆಗೆ ಪರಿಹಾರ ನಮ್ಮಲ್ಲೇ ಕಂಡುಕೊಳ್ಳಲು ಸಾಧ್ಯ ಎಂದು ಉಡುಪಿ ಜಿಪಂನ ಉಪಕಾರ್ಯದರ್ಶಿ ಹಾಗೂ ಯೋಜ ನಾಧಿಕಾರಿ ಶ್ರೀನಿವಾಸ ರಾವ್ ಹೇಳಿದ್ದಾರೆ.
ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಶನಿವಾರ ನಡೆದ ಒಂದು ದಿನದ ಮಳೆ ನೀರು ಕೊಯ್ಲು ಕಾರ್ಯಾಗಾರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಭಾರತೀಯ ವಿಕಾಸ ಟ್ರಸ್ಟಿನ ಆಡಳಿತ ಟ್ರಸ್ಟಿ ಕೆ.ಎಂ.ಉಡುಪ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ನಾರಾಯಣ ಶೆಣೈ, ಬಿವಿಟಿ ಸಿಇಒ ಮನೋಹರ ಕಟ್ಗೇರಿ ಉಪಸ್ಥಿತರಿದ್ದರು. ನಿವೃತ್ತ ಪ್ರಾಂಶುಪಾಲ ಬಿ.ಸೀತಾರಾಮ ಶೆಟ್ಟಿ ಕಾರ್ಯಕ್ರಮ ನಿರೂಪಿದರು. ಬಿವಿಟಿ ಮುಖ್ಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀಬಾಯಿ ವಂದಿಸಿದರು.