ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದಿಂದ ರಕ್ತದಾನ ಶಿಬಿರ
Update: 2016-06-05 21:08 IST
ಮಂಜೇಶ್ವರ, ಜೂ.5: ವಿಶ್ವ ರಕ್ತದಾನ ತಿಂಗಳ ಆಚರಣೆಯ ಅಂಗವಾಗಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ) ಮಂಗಳೂರು ಮತ್ತು ಸುರಕ್ಷಾ ದಂತ ಚಿಕಿತ್ಸಾಲಯದ ಜಂಟಿ ಆಶ್ರಯದಲ್ಲಿ ರಕ್ತದ ಬ್ಯಾಂಕ್, ತೇಜಸ್ವಿನಿ ಆಸ್ಪತ್ರೆ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.
ಶಿಬಿರದಲ್ಲಿ ಮೀಂಜ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಿ.ಸೋಮಪ್ಪ, ಸುರಕ್ಷಾ ದಂತ ಚಿಕಿತ್ಸಾಲಯದ ಡಾ.ಮುರಳಿ ಮೋಹನ್ ಚೂಂತಾರು, ಇಕ್ಬಾಲ್ ಕಳಿಯೂರು, ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ, ಇರ್ಷಾದ್ ಮಂಜೇಶ್ವರ, ಯುತ್ ಕಾಂಗ್ರೆಸ್ ಕಾರ್ಯದರ್ಶಿ, ಎ.ಬಿ.ಶೆಟ್ಟಿ ದಂತ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ರಾಜೇಂದ್ರ ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.
ಸುಮಾರು 20ಕ್ಕೂ ಹೆಚ್ಚು ಮಂದಿ ಈ ರಕ್ತದಾನ ಶಿಬಿರದಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಡಾ.ಮುರಳಿ ಮೋಹನ್ ಚೂಂತಾರು ವಂದಿಸಿದರು.