ಶಾಸಕ ಲೋಬೊರಿಂದ ಅಭಿವೃದ್ದಿ ಕಾಮಗಾರಿ ವೀಕ್ಷಣೆ

Update: 2016-06-07 13:17 GMT

ಮಂಗಳೂರು, ಜೂ. 7: ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್. ಲೋಬೊ ನಗರದ ಬಜಾಲ್ ಅಂಡರ್ ಪಾಸ್ ಬಳಿ ಇರುವ ವೀರನಗರ ಹಾಗೂ ಜಯನಗರಕ್ಕೆ ಹೋಗುವ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು.

ಸುಮಾರು 1.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ರಸ್ತೆ ಕಾಮಗಾರಿಯನ್ನು ಲ್ಯಾಂಡ್ ಆರ್ಮಿ ಸಂಸ್ಥೆಗೆ ವಹಿಸಲಾಗಿದೆ. ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಈ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿಯ ಸದಸ್ಯ ಲ್ಯಾನ್ಸ್‌ಲಾಟ್ ಪಿಂಟೋ, ಅಧಿಕಾರಿಗಳಾದ ಲಿಂಗೇ ಗೌಡ, ಯಶವಂತ, ಗಣಪತಿ ಹಾಗೂ ಅಶ್ರಫ್ ಬಜಾಲ್, ಸುಧೀರ್ ಟಿ.ಕೆ., ಕೃತಿನ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News