ಕೊಣಾಜೆ: ವಿಶ್ವಮಂಗಳ ಶಾಲೆಯಲ್ಲಿ ಪರಿಸರ ದಿನಾಚರಣೆ
Update: 2016-06-07 21:21 IST
ಕೊಣಾಜೆ, ಜೂ.7: ಕೊಣಾಜೆಯ ವಿಶ್ವಮಂಗಳ ವಿದ್ಯಾಸಂಸ್ಥೆಂುಲ್ಲಿ ಪರಿಸರ ದಿನಾಚರಣೆಯನ್ನು ವಿದ್ಯಾರ್ಥಿಗಳು ಪರಿಸರಗೀತೆ ಹಾಗೂ ಜಾಥಾ ನಡೆಸುವ ಮೂಲಕ ಸೋಮವಾರ ಆಚರಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರಿಸರದ ಮಹತ್ತ್ವವನ್ನು ಕುರಿತು ಮಾತನಾಡಿ, ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು. ಬಳಿಕ ಪರಿಸರ ಪರ ಘೋಷಣೆಗಳೊಂದಿಗೆ, ಕೊಣಾಜೆ ಪರಿಸರದಲ್ಲಿ ಜಾಥಾವನ್ನು ನಡೆಸಿದ ಬಳಿಕ ಶಾಲಾ ಆವರಣವನ್ನು ಸ್ವಚ್ಛಗೊಳಿಸುವುದರೊಂದಿಗೆ ಪರಿಸರ ಸ್ವಚ್ಛತೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು.
ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.