ಧನಾತ್ಮಕ ಚಿಂತನೆಗಳಿಂದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಾಧ್ಯ: ಸತೀಶ್‌ಕುಮಾರ್
ಸೊರಬ, ಜೂ.7: ವಿದ್ಯಾರ್ಥಿಗಳು ಋಣಾತ್ಮಕ ಚಿಂತನೆಗಳನ್ನು ಬದಿಗೊತ್ತಿ ಧನಾತ್ಮಕ ಚಿಂತನೆ ಗಳನ್ನು ಬೆಳೆಸಿಕೊಂಡಾಗ ಮಾತ್ರ ಶೈಕ್ಷಣಿಕ ಪ್ರಗತಿ ಹೊಂದಲು ಸಾಧ್ಯ ಎಂದು ಸಾಗರ ಉಪವಿಭಾ ಗಾಧಿಕಾರಿ ಸತೀಶ್‌ಕುಮಾರ್ ಹೇಳಿದರು.
ಪಟ್ಟಣದ ಸರಕಾರಿ ಪಪೂ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ರೋಟರಿ ಕ್ಲಬ್ ಸೊರಬ, ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇವರ ಸಹಯೋಗದೊಂದಿಗೆ ಉಚಿತ ಹೃದಯ ಮತ್ತು ಮಧುಮೇಹ ತಪಾಸಣಾ ಶಿಬಿರ ಹಾಗೂ ಎಸೆಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ತಾಲೂಕಿಗೆ ಅತೀ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನಾನ್ಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯು ವೈದ್ಯರು, ಇಂಜಿನಿಯರ್‌ಗಳಾಗಲು ಬಯಸುತ್ತಾರೆ. ಆದರೆ ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವಲ್ಲಿ ಮುಂದಾಗುವ ಮೂಲಕ ದೇಶ ಸೇವೆಗೆ ಮುಂದಾಗಬೇಕೆಂದು ಕರೆ ನೀಡಿದ ಅವರು, ವಿದ್ಯಾರ್ಥಿಗಳು ಪಡೆದ ಉತ್ತಮ ಅಂಕಗಳು ಪ್ರತಿಷ್ಠಿತ ಕಾಲೇಜುಗಳಿಗೆ ಪ್ರವೇಶ ಪಡೆಯಲು ಸಹಕಾರಿಯಾಗುತ್ತವೆ. ಆದರೆ ಇದೇ ಗುಣ ಮಟ್ಟವನ್ನು ಮುಂದಿನ ಶೈಕ್ಷಣಿಕ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ದೇಶದ ಮಹಾನ್ ವ್ಯಕ್ತಿಗಳಾಗಬಹುದು ಎಂದರು. ಸತತ ಪರಿಶ್ರಮದಿಂದ ದೇಶದ ಮಹಾ
್ ವ್ಯಕ್ತಿ ಗಳಲ್ಲಿ ಒಬ್ಬರಾದ ಡಾ. ಎ.ಪಿ. ಜೆ. ಅಬ್ದುಲ್ ಕಲಾಂರವರು ನಮಗೆಲ್ಲ ರಿಗೂ ಮಾದರಿಯಾಗಿದ್ದಾರೆ. ವಿದ್ಯಾರ್ಥಿಗಳು ತಾವು ಪಡೆದ ಹೆಚ್ಚು ಅಂಕಗಳ ಮೇಲೆ ಹಿಗ್ಗದೇ ಅನುತ್ತೀರ್ಣ ರಾದವರು ಕುಗ್ಗದೆ ಸತತ ಪರಿಶ್ರಮದಿಂದ ಮುನ್ನಡೆಯಬೇಕೆಂದು ಸಲಹೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸತ್ಯನಾರಾಯಣ ಮಾತಾನಾಡಿ, ಎಸೆಸೆಲ್ಸಿ, ಪಿಯು ಪರೀಕ್ಷೆಯಲ್ಲಿ ಶೇ. 90/95 ಅಂಕ ಪಡೆದರೆ ಸಾಲದು ಮುಂದಿನ ಶೈಕ್ಷಣಿಕ ಹಂತಗಳಲ್ಲಿ ಅದಕ್ಕಿಂತಲು ಹೆಚ್ಚು ಅಂಕ ಪಡೆಯಲು ಪ್ರಯತ್ನಿಸಬೇಕು. ಗಳಿಕೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಬಗ್ಗೆ ಪ್ರೋತ್ಸಾಹಿಸಲು ಮುಂದಾಗುವ ನಾವು ಕಡಿಮೆ ಅಂಕ ಪಡೆದ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ವನ್ನು ಹೆಚ್ಚಿಸಲು ಅವರ ಬಗ್ಗೆ ವಿಶೇಷ ವಾದ ಗಮನ ಹರಿಸಿದಾಗ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರಿಯಲು ಸಹಕಾರಿಯಾಗುತ್ತದೆ. ಪೋಷಕರು ಇಲಾಖೆ ಯೊಂದಿಗೆ ಸಹಕಾರ ನೀಡಿದಲ್ಲಿ ಇಂತಹ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಎಸೆಸೆಲ್ಸಿ, ಪಿಯು ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಈ ಸಂದಭರ್ದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಡಾ. ಜ್ಞ್ಞಾನೇಶ್, ಸಪಪೂ ಕಾಲೇಜು ಪ್ರಾಂಶುಪಾಲ ಚಿದಂಬರ್, ಉಪಪ್ರಾಂಶುಪಾಲ ಬಸವರಾಜ ಜಡ್ಡಳ್ಳಿ, ಕ್ಷೇತ್ರ ಸಮನ್ವಯ ಅಧಿಕಾರಿ ಪರುಶುರಾಮ್, ಶೇಷಾಚಲ, ನಾಗರಾಜ್ ಗುತ್ತಿ, ಡಾ. ತೋಕಪ್ಪ ಮತ್ತಿತರರು ಉಪಸ್ಥಿತರಿದ್ದರು.