ಫಿಲೋಮಿನಾ ಕಾಲೇಜಿಗೆ ಎಂಎ ಅರ್ಥಶಾಸ್ತ್ರದಲ್ಲಿ ಶೇ.100 ಫಲಿತಾಂಶ
Update: 2016-06-08 20:21 IST
ಪುತ್ತೂರು, ಜೂ.8: ಮಂಗಳೂರು ವಿಶ್ವವಿದ್ಯಾನಿಲಯವು ಡಿಸೆಂಬರ್ 2015ರಲ್ಲಿ ನಡೆಸಿದ ಪ್ರಥಮ ಸೆಮಿಸ್ಟರ್ ಮತ್ತು ಮೂರನೆಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗವು ಶೇ.100 ಫಲಿತಾಂಶ ದಾಖಲಿಸಿದೆ.
ಪ್ರಥಮ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ 23 ವಿದ್ಯಾರ್ಥಿಗಳಲ್ಲಿ 7 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮೂರನೆಯ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ 25 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಸೆಮಿಸ್ಟರ್‌ನಲ್ಲಿ ಪುತ್ತೂರು ತಾಲೂಕಿನ ಕುಂಜೂರು ಪಂಜದ ಪವಿತ್ರಾ ಜಿ. ಶೇ. 78 ಅಂಕಗಳೊಂದಿಗೆ ಅಗ್ರ ಸ್ಥಾನವನ್ನು ಗಳಿಸಿದ್ದಾರೆ.
ತೃತೀಯ ಸೆಮಿಸ್ಟರ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿರ್ಸಿಯ ಗೀತಾ ಭಟ್ ಶೇ.74 ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.