ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಐವರಿಗೆ ಗಾಯ
Update: 2016-06-08 21:26 IST
ಕಾಪು, ಜೂ.8: ಕಾಪುವಿನ ಕೊಪ್ಪಲಂಗಡಿ ರಾಹೆ 66ರಲ್ಲಿ ಮಂಗಳೂರಿನಿಂದ ಉಡುಪಿಯತ್ತ ಸಂಚರಿಸುತಿದ್ದ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿದ್ಯುತ್ ಕಂಬ ಕಾರಿನ ಮೇಲೆ ಬಿದ್ದಿದೆ. ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಮೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬ ಮತ್ತು ಲೈನ್ ಜೋಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.