ಹೊಟೇಲ್‌ಗಳಲ್ಲಿ ಸ್ವಚ್ಛತೆಗೆ ಒತ್ತು
Update: 2016-06-08 23:13 IST
ಮಡಿಕೇರಿ, ಜೂ. 8: ಹೊಟೇಲ್, ಬೇಕರಿ ಹಾಗೂ ವಿವಿಧ ಮಳಿಗೆಗಳಿಗೆ ಭೇಟಿ ನೀಡಿದ ಸ್ಥಾಯಿ ಸಮಿತಿ ಅಧ್ಯಕ್ಷ ಮನ್ಸೂರ್, ಪೌರಾಯುಕ್ತರಾದ ಪುಷ್ಪಾ ವತಿ ಹಾಗೂ ಅಧಿಕಾರಿ ವರ್ಗ ಅಶುಚಿತ್ವದ ವಾತಾವರಣದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಗುಣಮಟ್ಟದ ಆಹಾರ ಪದಾರ್ಥ ಹಾಗೂ ಬಿಸಿ ನೀರನ್ನು ಗ್ರಾಹಕರಿಗೆ ನೀಡುವಂತೆ ಸೂಚನೆ ನೀಡಿದರು. ರೋಗ ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಗುಣಮಟ್ಟ ಹಾಗೂ ಸ್ವಚ್ಛತೆಯನ್ನು ಕಾಯ್ದುಕೊಳ್ಳದಿದ್ದಲ್ಲಿ ಲೈಸೆನ್ಸ್ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದರು.