×
Ad

ಪುನರ್ವಸತಿ ಕಲ್ಪಿಸಲು ಕ್ರಮ: ಸಚಿವ ಸಂಪುಟ ಅನುಮೋದನೆ : ಸಚಿವ ದಿನೇಶ್ ಗುಂಡೂರಾವ್

Update: 2016-06-08 23:14 IST

ಮಡಿಕೇರಿ, ಜೂ. 8: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನಲ್ಲಿ ಹಾರಂಗಿ ಅಣೆಕಟ್ಟು ನಿರ್ಮಾಣದಿಂದ ಮುಳುಗಡೆಯಾದ ಪ್ರದೇಶದಲ್ಲಿ ವಾಸಿಸುತ್ತಿದ್ದ ಜನರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಬಹುದಿನಗಳ ಬೇಡಿಕೆಯಾಗಿದ್ದ ಯಡವನಾಡು ಮತ್ತು ಅತ್ತೂರು ಗ್ರಾಮಗಳಿಗೆ ಮೀಸಲು ಅರಣ್ಯವನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿರುವ ಭೂಮಿಯನ್ನು ಡಿನೋಟಿಫೈ ಮಾಡುವ ಬಗ್ಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸುಮಾರು 40 ವರ್ಷಗಳಿಂದ ಮುಳುಗಡೆ ಪ್ರದೇಶದಲ್ಲಿ ವಾಸಿಸುತ್ತಿದ್ದ ಜನರಿಗೆ ಪುನರ್ ವಸತಿ ಕಲ್ಪಿಸುವ ಸಲುವಾಗಿ ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿರುವ ಯಡವನಾಡು ಮೀಸಲು ಅರಣ್ಯ ಪ್ರದೇಶದ 426.90 ಹೆಕ್ಟೇರ್ ಭೂಮಿ ಮತ್ತು ಅತ್ತೂರು ಅರಣ್ಯ ಪ್ರದೇಶದ 298.40 ಹೆಕ್ಟೇರ್ ಭೂಮಿಯನ್ನು ಡಿನೋಟಿಫೈ ಮಾಡುವ ಸಲುವಾಗಿ ಬುಧವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲೆಗೆ ಭೇಟಿ ನೀಡುವ ಸಂದರ್ಭಗಳಲ್ಲಿ ಹಾರಂಗಿ ಜಲಾಶಯದ ಮುಳುಗಡೆ ಪ್ರದೇಶದ ಯಡವನಾಡು ಮತ್ತು ಅತ್ತೂರು ಪ್ರದೇಶದಲ್ಲಿನ ಗ್ರಾಮಸ್ಥರು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ ಪುನರ್ವಸತಿ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದ್ದರು. ಈ ಬಗ್ಗೆ ಆಸಕ್ತಿ ವಹಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಈ ಎರಡು ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News