ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Update: 2016-06-08 23:49 IST
ಉಡುಪಿ, ಜೂ.8: ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಹಾಗೂ ನಗರ ಸಭಾ ವ್ಯಾಪ್ತಿಯ ಅಂಗನವಾಡಿ ಕಾರ್ಯ ಕರ್ತೆ ಮತ್ತು ಸಹಾಯಕಿಯರ ತಾತ್ಕಾ ಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿ ಇವರ ಕಚೇರಿಯ ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸಲಾಗಿದೆ. ಇದಕ್ಕೆ ಯಾವುದೇ ಆಕ್ಷೇಪ ಇದ್ದಲ್ಲಿ ಜೂ.13ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಉಡುಪಿ ಇಲ್ಲಿಗೆ ಖುದ್ದಾಗಿ ಅಥವಾ ಕಚೇರಿಗೆ ಸಲ್ಲಿಸು ವಂತೆ ಪ್ರಕಟನೆ ತಿಳಿಸಿದೆ.