ಪಾವನಾ ಐತಾಳ್‌ಗೆ ‘ಕಲಾಶ್ರೀ ಪ್ರಶಸ್ತಿ’
Update: 2016-06-08 23:54 IST
ಉಡುಪಿ, ಜೂ.8: ರಾಜ್ಯ ಬಾಲಭವನ ಸೊಸೈಟಿಯಿಂದ ಮೈಸೂರಿನಲ್ಲಿ ಇತ್ತೀಚೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ ‘ಕಲಾಶ್ರೀ’ ಸ್ಪರ್ಧೆಯಲ್ಲಿ ಸೃಜನಾತ್ಮಕ ಪ್ರದರ್ಶನ ಕಲಾ ವಿಭಾಗದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಪಾವನಾ ಐತಾಳ್ ಪ್ರಶಸ್ತಿ ಪಡೆದಿದ್ದಾರೆ. ಇವರು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.