ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಲಾರಿ ವಶ
Update: 2016-06-09 20:30 IST
ಮಂಗಳೂರು, ಜೂ. 9: ಮರಕಡ ಗ್ರಾಮದಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದುದನ್ನು ಪತ್ತೆ ಹಚ್ಚಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಕೆ.ಎಸ್. ನಾಗೇಂದ್ರಪ್ಪ, ಮರಳು ತುಂಬಿದ ಲಾರಿಯನ್ನು ವಶಪಡಿಸಿಕೊಂಡು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇಂದು ಬೆಳಗ್ಗೆ ಮರಳು ತೆಗೆಯುತ್ತಿರುವ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆಸಿದಾಗ ರಾಕೇಶ್ ಮರವೂರು ಎಂಬಾತ ಮರಳು ತೆಗೆಯುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ. ಈ ಬಗ್ಗೆ ಅವರು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.