ಪೂಜಾರಿ ವಿರುದ್ಧ ಹೇಮನಾಥ್ ಶೆಟ್ಟಿ ನೀಡಿದ ಹೇಳಿಕೆಗೆ ಸಚಿವ ಖಾದರ್ ಅಸಮಾಧಾನ
Update: 2016-06-09 21:19 IST
ಮಂಗಳೂರು, ಜೂ.9: ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ವಿರುದ್ಧ ಕಾವು ಹೇಮನಾಥ ಶೆಟ್ಟಿ ಅವರು ನೀಡಿರುವ ಹೇಳಿಕೆಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಹಿರಿಯ ನಾಯಕರಾಗಿರುವ ಜನಾರ್ದನ ಪೂಜಾರಿಯವರು ಜಿಲ್ಲೆಯ ರಾಜಕೀಯದಲ್ಲಿ ಸ್ವಾಭಿಮಾನದ ಸಂಕೇತವಾಗಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿ ಪ್ರಾಮಾಣಿಕತೆಗೆ ಸಂಕೇತವಾಗಿದ್ದಾರೆ.
ದ.ಕ ಜಿಲ್ಲೆಯಲ್ಲಿ ನನ್ನನ್ನು ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರುಗಳು ಅವರಿಂದ ಪ್ರಯೋಜನವನ್ನು ಪಡೆದಿದ್ದಾರೆ. 1978ರಲ್ಲಿ ಪಕ್ಷ ಇಬ್ಭಾಗವಾದಾಗ ಜಿಲ್ಲೆಯಲ್ಲಿ ಪಕ್ಷ ಕಟ್ಟಿದವರು ಜನಾರ್ದನ ಪೂಜಾರಿ, ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯಿಲಿ ಎಂಬುದನ್ನು ಯಾರೂ ಮರೆಯಬಾರದು ಎಂದು ಹೇಳಿದ್ದಾರೆ.