ಕೂಡ್ಲಿಗಿ ಡಿವೈಎಸ್ಪಿ ಅನುಪಮಾ ಶೆಣೈ ರಾಜೀನಾಮೆ ಅಂಗೀಕಾರ
Update: 2016-06-09 21:45 IST
ಬೆಂಗಳೂರು, ಜೂ.9: ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಉಪವಿಭಾಗದಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅನುಪಮಾ ಶೆಣೈ ಅವರ ರಾಜೀನಾಮೆಯನ್ನು ರಾಜ್ಯ ಸರಕಾರ ಅಂಗೀಕರಿಸಿದೆ.
ರಾಜೀನಾಮೆ ಪತ್ರವನ್ನು ತಕ್ಷಣವೇ ಜಾರಿಗೆ ಬರುವಂತೆ ಸರಕಾರ ಅಂಗೀಕರಿಸಿದೆ ಎಂದು ಕರ್ನಾಟಕ ಸರಕಾರದ ಅಧೀನ ಕಾರ್ಯದರ್ಶಿ ಬಿ. ವೆಂಕಟೇಶಮೂರ್ತಿ ಅಧಿಸೂಚನೆ ಹೊರಡಿಸಿದ್ದಾರೆ.