×
Ad

ಶಿವಮೊಗ್ಗ ಜಿಪಂ ವಿಶೇಷ ಸಭೆೆಯತ್ತ ಕುತೂಹಲದ ಚಿತ್ತ!

Update: 2016-06-09 23:08 IST

ಶಿವಮೊಗ್ಗ, ಜೂ. 9: ಶಿವಮೊಗ್ಗ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಹೈಡ್ರಾಮಾಕ್ಕೆ ಸದ್ಯಕ್ಕೆ ತೆರೆ ಬೀಳುವ ಲಕ್ಷಣಗಳು ಕಾಣುತ್ತಿಲ್ಲ. ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನಗಳಲ್ಲಿ ಒಂದಾದರೂ ತನಗೆ ನೀಡಲೇಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ. ಇದರಿಂದ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಜೂ. 13 ರಂದು ಕರೆಯಲಾಗಿರುವ ಜಿಪಂ ವಿಶೇಷ ಸಭೆಯು ಮತ್ತೆ ಕಾವೇರಿದ ವಾತಾವರಣ ಚರ್ಚೆಗೆ ಸಾಕ್ಷಿಯಾಗುವುದು ಮೇಲ್ನೋಟಕ್ಕೆ ಖಚಿತವಾಗಿದೆ. ಕಳೆದ ಬಾರಿ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಜಿಪಂ ವಿಶೇಷ ಸಾಮಾನ್ಯ ಸಭೆೆಯಲ್ಲಿ, ಬಿಜೆಪಿ ಸದಸ್ಯರ ಅನುಪಸ್ಥಿತಿಯಲ್ಲಿ ಸಮಿತಿಗಳ ಅಧ್ಯಕ್ಷರ ಆಯ್ಕೆ ಅಧಿಕಾರವನ್ನು ಜಿಪಂ ಅಧ್ಯಕ್ಷರಿಗೆ ನೀಡುವ ನಿರ್ಣಯ ಅಂಗೀಕರಿಸಲಾಗಿರುವುದು ಸರಿಯಲ್ಲ. ಇದು ಕಾನೂನುಬಾಹಿರವಾಗಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಇತ್ತೀಚೆಗೆ ಜಿಪಂ ಸಿಇಒಗೆ ಮನವಿ ಪತ್ರ ಅರ್ಪಿಸಿದ್ದರು. ಜೊತೆಗೆ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಗೆ ಮತ್ತೊಂದು ವಿಶೇಷ ಸಾಮಾನ್ಯ ಸಭೆ ಕರೆಯಬೇಕು ಎಂದು ಆಗ್ರಹಿಸಿದ್ದರು. ನಿರ್ದಿಷ್ಟ ಸಂಖ್ಯೆಯ ಸದಸ್ಯರು ವಿಶೇಷ ಸಭೆ ಕರೆಯುವಂತೆ ಮನವಿ ಮಾಡಿದಾಗ, ಸಭೆೆ ಕರೆಯಲು ಪಂಚಾಯತ್ ರಾಜ್ ಕಾಯ್ದೆಯಲ್ಲಿ ಅವಕಾಶವಿದೆ. ಈ ನಿಯಮದಂತೆ ವಿಶೇಷ ಸಭೆ ಕರೆಯಲಾಗಿದೆ. ಆದರೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಗಾಗಿಯೇ ಈ ಸಭೆೆ ಕರೆಯಲಾಗಿದೆಯೇ ಎಂಬುವುದರ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲವಾಗಿದೆ. ಜಿಲ್ಲಾ ಪಂಚಾಯತ್ ಪ್ರಕಟನೆಯಲ್ಲಿಯೂ ಕೂಡ ಅ

ಧ್ಯಕ್ಷೆ ಜ್ಯೋತಿ ಎಸ್.ಕುಮಾರ್‌ರವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ಕರೆಯಲಾಗಿದೆ ಎಂದಷ್ಟೇ ಹೇಳಲಾಗಿದೆ. ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದ ಯಾವುದೇ ಮಾಹಿತಿಯೂ ಇಲ್ಲವಾಗಿರುವುದು ನಾನಾ ರೀತಿಯ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಏನಾಯ್ತು?: ಕಳೆದ ಸಭೆಯಲ್ಲಿ ಬಿಜೆಪಿ ಪಕ್ಷದ ಸದಸ್ಯರು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಗಳನ್ನು ಬಿಜೆಪಿಗೆ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ಇದಕ್ಕೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಜೆಡಿಎಸ್‌ಗಳ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಬಿಜೆಪಿ ಬೇಡಿಕೆೆ ಮನ್ನಣೆ ನೀಡಿರಲಿಲ್ಲ. ಈ ವೇಳೆ ಸಭೆಯನ್ನು ಕೆಲ ನಿಮಿಷಗಳ ಕಾಲ ಮುಂದೂಡಿ ಸಂಧಾನ ಮಾತುಕತೆ ನಡೆದಿತ್ತು. ಆದರೆ ಒಮ್ಮತದ ನಿರ್ಣಯ ಅಂಗೀಕರಿಸಲು ಸಾಧ್ಯಾಗಿರಲಿಲ್ಲ.

ನಂತರ ಸಭೆೆ ಸೇರಿದ ವೇಳೆ ಬಿಜೆಪಿ ಸದಸ್ಯರು ಗೈರು ಹಾಜರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಸದಸ್ಯರು ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆಯ ಅಧಿಕಾರವನ್ನು ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್‌ಗೆ ನೀಡುವ ನಿರ್ಣಯ ಅಂಗೀಕರಿಸಿದ್ದರು. ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಮುಂದೂಡಲಾಗಿದ್ದ ಸಭೆಯನ್ನು ಮುಂದುವರಿಸುವ ಬಗ್ಗೆ ತಮಗೆ ಮಾಹಿತಿ ನೀಡದೆ ಕಾಂಗ್ರೆಸ್-ಜೆಡಿಎಸ್ ಸದಸ್ಯರು ಸಭೆ ನಡೆಸಿದ್ದಾರೆ. ತಮಗೆ ಅನುಕೂಲಕರವಾದ ನಿರ್ಣಯ ಅಂಗೀಕರಿಸಿದ್ದಾರೆ. ಇದು ಕಾನೂನುಬಾಹಿರವಾದುದಾಗಿದೆ. ಹೊಸದಾಗಿ ಸಭೆೆ ಕರೆಯುವಂತೆ ಆಗ್ರಹಿಸಿದ್ದರು. ಮುಂದೇನು?:

ಜೂ. 13 ರ ಸಭೆೆಯನ್ನು ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಗಾಗಿಯೇ ಕರೆಯಲಾಗಿದೆ ಎಂಬುವುದರ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲವಾಗಿದೆ. ವಿಶೇಷ ಸಭೆೆ ಕರೆಯಲಾಗಿದೆ ಎಂದಷ್ಟೇ ಹೇಳಲಾಗಿದೆ. ಮತ್ತೊಂದೆಡೆ ಆಡಳಿತ ಪಕ್ಷದ ಸದಸ್ಯರು ಈಗಾಗಲೇ ನಿರ್ಣಯ ಅಂಗೀಕರಿಸಲಾಗಿದೆ. ಮತ್ತೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ನಿರ್ಣಯ ಅಂಗೀಕರಿಸುವ ಪ್ರಶ್ನೆಯೇ ಇಲ್ಲವೆಂದು ಹೇಳುತ್ತಿದ್ದಾರೆ. ಮುಂದೇನಾಗಲಿದೆ ಎಂಬುವುದನ್ನು ಕಾದು ನೋಡಬೇಕಾಗಿದೆ. ಕಳೆದ ಬಾರಿಯ ವಿಶೇಷ ಸಭೆೆಯನ್ನು ನಿಯಮಬದ್ಧ್ದವಾಗಿ ನಡೆಸಲಾಗಿದೆ. ಯಾವುದೇ ನಿಯಮ ಉಲ್ಲಂಘಿಸಿಲ್ಲ. ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಯ ಅಧಿಕಾರವನ್ನು ಅಧ್ಯಕ್ಷರಿಗೆ ವಹಿಸುವ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಗಿದೆ. ಬಿಜೆಪಿಯ ಆರೋಪದಲ್ಲಿ ಯಾವುದೇ ಹುರುಳಿಲ್ಲ’

<

ವೇದಾ ವಿಜಯಕುಮಾರ್, ಉಪಾಧ್ಯಕ್ಷೆ ಪ್ರ

ಸ್ತುತ ಜಿಪಂ ಚುನಾವಣೆಯಲ್ಲಿ ಜಿಲ್ಲೆಯ ಗ್ರಾಮೀಣ ಮತದಾರರು ಬಿಜೆಪಿ ಪಕ್ಷದ ಪರವಾಗಿ ಜನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಕಾಂಗ್ರೆಸ್-ಜೆಡಿಎಸ್‌ನ ಅಪವಿತ್ರ ಮೈತ್ರಿಯಿಂದ ಪಕ್ಷಕ್ಕೆ ಅಧಿಕಾರ ಕೈ ತಪ್ಪಿದೆ. ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಯ ವೇಳೆ ಬಿಜೆಪಿಗೆ ಪ್ರಾತಿನಿಧ್ಯ ನೀಡಬೇಕು. ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಅಧ್ಯಕ್ಷ ಸ್ಥಾನ ಕೊಡಲೇಬೇಕು.

<

ವೀರಭದ್ರಪ್ಪ ಪೂಜಾರ್, ಬಿಜೆಪಿ ಸದಸ್ಯ

ಬಿಜೆಪಿಯ 15 ಜಿಪಂ ಸದಸ್ಯರು, ಆ ಪಕ್ಷಕ್ಕೆ ಸೇರಿದ ಸಂಸದರು, ವಿಧಾನಪರಿಷತ್ ಸದಸ್ಯರು ಜಿಪಂನ ವಿಶೇಷ ಸಭೆೆ ಕರೆಯುವಂತೆ ಮನವಿ ಮಾಡಿದ್ದರು. ಪಂಚಾಯತ್ ರಾಜ್ ನಿಯಮಗಳಿಗೆ ಅನುಗುಣವಾಗಿ ಜೂ. 13 ರಂದು ಬೆಳಗ್ಗೆ 11 ಗಂಟೆಗೆ ಜಿಪಂ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್‌ರವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ಕರೆಯಲಾಗಿದೆ.

< ಕೆ. ರಾಕೇಶ್‌ಕುಮಾರ್, ಸಿಇಒ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News