ಸಚಿವರ ಶ್ಲಾಘನೀಯ ಪ್ರಯತ್ನ
Update: 2016-06-09 23:47 IST
ಮಾನ್ಯರೆ,
ಗಡಿಭಾಗದ ಕನ್ನಡ ಮಾಧ್ಯಮ ಶಾಲೆಗಳ ವಾಸ್ತವ ಸ್ಥಿತಿಗತಿಗಳನ್ನು ಅವಲೋಕಿಸಿ, ಆ ಶಾಲೆಗಳಿಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳು ಗಡಿಭಾಗದ ಶಾಲೆಗಳ ಅಧ್ಯಯನಕ್ಕೆ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿರುವ ಮಾನ್ಯ ಶಿಕ್ಷಣ ಸಚಿವರಿಗೆ ಅಭಿನಂದನೆಗಳು. ಇಂತಹ ಪ್ರವಾಸದಿಂದಾದರೂ ಗಡಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಮಾಧ್ಯಮ ಶಾಲೆಗಳ ಪರಿಸ್ಥಿತಿ ಬದಲಾಗಿ, ಗುಣಮಟ್ಟದ ಶಿಕ್ಷಣದೊಂದಿಗೆ ಅಲ್ಲಿನ ಶಾಲೆಗಳು ಇನ್ನೂ ಹೆಚ್ಚು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲಿ ಎಂಬುದೇ ನನ್ನಂಥವರ ಅಭಿಮತ.