×
Ad

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Update: 2016-06-09 23:59 IST

ಮಂಗಳೂರು, ಜೂ.9: ಪ್ರಸಕ್ತ ಸಾಲಿಗೆ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವವರ ಕುಟುಂಬದವರ ಮಕ್ಕಳಿಗೆ ಮೆಟ್ರಿಕ್‌ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಇಲಾಖಾ ವೆಬ್ ಸೈಟ್: www.sw.kar.nic.in ಗೆ ಹೋಗಿ ಅದರಲ್ಲಿ pre metric scholarshipನ್ನು ಕ್ಲಿಕ್ ಮಾಡಿದ ನಂತರ ಹೊಸ Online ಅರ್ಜಿ ಕ್ಲಿಕ್ ಮಾಡಿದ ನಂತರ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವವರ ಮಕ್ಕಳ ವಿದ್ಯಾರ್ಥಿವೇತನ option ನಲ್ಲಿ ಬರುವ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡುವುದು. ಅರ್ಜಿ ಸಲ್ಲಿಸುವಾಗ ತೊಂದರೆಯಾದಲ್ಲಿ ಇಲಾಖೆಯ ಟೋಲ್ ಫ್ರೀ ಸಂಖ್ಯೆ: 180042521111 ಗೆ ಕರೆಮಾಡಿ ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್ ಭವನ, ಕೊಡಿಯಾಲ್‌ಬೈಲ್, ಮಂಗಳೂರು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News