ಸ್ಫೋಟಕ ಸಾಮಗ್ರಿ ಪತ್ತೆ
Update: 2016-06-10 23:11 IST
ಶಿವಮೊಗ್ಗ, ಜೂ. 10: ಜಿಲ್ಲೆಯ ಸಾಗರ ತಾಲೂಕಿನ ಕಾನ್ಲೆ ಸಮೀಪದ ಕೆಲುವೆ ಕೆರೆಯಲ್ಲಿ ಜಿಲೆಟಿನ್ ಕಡ್ಡಿ ಸೇರಿದಂತೆ ಅಪಾರ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿದ್ದು, ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಲವೆ ಕೆರೆಗೆ ಮೀನು ಹಿಡಿಯಲು ಹೋಗಿದ್ದವರು ಬಲೆ ಹಾಕಿದಾಗ ಸ್ಪೋಟಕ ಸಾಮಗ್ರಿಗಳು ಸಿಕ್ಕಿವೆ. ತಕ್ಷಣವೇ ಗ್ರಾಮಸ್ಥರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಈ ಸ್ಫೋಟಕ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೆರೆಯಲ್ಲಿ ಸಿಕ್ಕಿರುವ ಜಿಲೆಟಿನ್ ಕಡ್ಡಿ ಹಾಗೂ ಸ್ಫೋಟಕ ವಸ್ತುಗಳು ಕಲ್ಲು ಸ್ಫೋಟಕ್ಕೆ ಬಳಸಲಾಗುತ್ತದೆ. ಆದರೆ ಈ ಭಾಗದಲ್ಲಿ ಜಲ್ಲಿ ಕ್ವಾರೆಗಳು ಇಲ್ಲ. ಸ್ಫೋಟಕ ಸಾಮಗ್ರಿಗಳನ್ನು ಕೆರೆಯಲ್ಲಿ ಹಾಕಿದವರ್ಯಾರು ಎಂಬುವುದು ನಿಗೂಢವಾಗಿ ಪರಿಣಮಿಸಿದ್ದು, ಸ್ಥಳೀಯರಲ್ಲಿ ಬಿಸಿ ಬಿಸಿ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.
ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಇನ್ನಷ್ಟೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.