ಸೊರಬ ತಾಪಂ ಚುನಾವಣೆ: ವೇಳಾಪಟ್ಟಿ ಪ್ರಕಟ

Update: 2016-06-10 17:55 GMT

ಶಿವಮೊಗ್ಗ, ಜೂ. 10: ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಸೊರಬ ತಾಲೂಕು ಪಂಚಾಯತ್‌ಗೆ 19 ಸದಸ್ಯ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಿರುತ್ತಾರೆ. ಜೂನ್ 13ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಜೂ. 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜೂ. 17 ನಾಮಪತ್ರ ಪರಿಶೀಲನೆ, ಜೂ. 20 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ. ಮತದಾನವು ಜೂ. 26ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ನಡೆಯಲಿದೆ. ಜೂ. 28ರಂದು ಬೆಳಗ್ಗೆ 8ರಿಂದ ಮತ ಎಣಿಕೆ ನಡೆಯುವುದು.

 ಈ ಚುನಾವಣೆಯ ನೀತಿ ಸಂಹಿತೆಯು ಸೊರಬ ತಾಲೂಕಿನ ಪಂಚಾಯತ್‌ವ್ಯಾಪ್ತಿಯಲ್ಲಿ ಮಾತ್ರ ಜೂ. 13ರಿಂದ ಜೂ. 28ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರದೇಶಗಳಲ್ಲಿರುವ ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಸಂಪೂರ್ಣವಾಗಿ ಮುಚ್ಚತಕ್ಕದ್ದು ಹಾಗೂ ಯಾರಾದರೂ ಮದ್ಯವನ್ನು ಸ್ವಾಧೀನದಲ್ಲಿಟ್ಟುಕೊಂಡಿರುವುದು ಕಂಡು ಬಂದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂತಹವರನ್ನು ಕಸ್ಟಡಿಯಲ್ಲಿ ಇಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.

ಈ ಚುನಾವಣೆಗೆ ತಹಶೀಲ್ದಾರ್, ಸೊರಬ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು, ಜಿಪಂ ಇಂಜಿನಿಯರ್ ವಿಭಾಗ, ಸೊರಬ ಇವರು ಚುನಾವಣಾಧಿಕಾರಿಗಳಾಗಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News