×
Ad

ಮಡಿಕೇರಿ: ನಗ-ನಗದು ಕಳವು

Update: 2016-06-11 23:20 IST

ಮಡಿಕೇರಿ, ಜೂ.11: ನಗರದ ಹೃದಯ ಭಾಗದಲ್ಲಿರುವ ಕೊಹಿನೂರು ರಸ್ತೆಯಲ್ಲಿರುವ ಶ್ರೀತುಳಸಿ ಚಿನ್ನಾಭರಣ ಮಳಿಗೆಗೆ ಕಳ್ಳರು ನುಗ್ಗಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಅಂದಾಜು 700 ಗ್ರಾಂ ಚಿನ್ನ ಹಾಗೂ 1.20 ಲಕ್ಷ ರೂ. ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬೀಗ ಮುರಿದು ಒಳನುಗ್ಗಿದ ಕಳ್ಳರು ಅಂಗಡಿಯಲ್ಲಿದ್ದ ಚಿನ್ನಾಭರಣ ಮತ್ತು ಕ್ಯಾಷ್ ಬಾಕ್ಸ್‌ನಲ್ಲಿದ್ದ ಹಣವನ್ನು ದೋಚಿದ್ದಾರೆ. ಅಂಗಡಿ ಮಾಲಕ ದೂರು ನೀಡಿದ ಹಿನ್ನೆಲೆ ಸ್ಥಳಕ್ಕೆ ನಗರ ಠಾಣಾ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಆಗಮಿಸಿ ಪರಿಶೀಲಿಸಿದರು. ಕಳ್ಳರ ಪತ್ತೆಗೆ ಪೊಲೀಸ್ ತನಿಖೆ ಮುಂದುವರಿದಿದೆ ಎಂದು ವೃತ್ತ ನಿರೀಕ್ಷಕ ಐ.ಪಿ.ಮೇದಪ್ಪ ತಿಳಿಸಿದ್ದಾರೆ. ಚಿನ್ನಾಭರಣದ ಅಂಗಡಿಯಲ್ಲಿ ಸಿಸಿ ಕ್ಯಾಮರಾ ಅಳವಡಿಸದೆ ಇರುವುದು ಮತ್ತು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಇರುವುದು ಕಳ್ಳರಿಗೆ ವರದಾನವಾಗಿದೆ. ಮುಖ್ಯ ರಸ್ತೆಯಲ್ಲೇ ಈ ಘಟನೆ ನಡೆದಿದ್ದರೂ ಪೊಲೀಸರ ಗಮನಕ್ಕೆ ಬಾರದೆ ಇರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News