×
Ad

ನಾಳೆ ಜಿಲ್ಲೆಗೆ ನೂತನ ಎಂಎಲ್ಸಿ ವೀಣಾಅಚ್ಚಯ್ಯ ಆಗಮನ

Update: 2016-06-11 23:23 IST

ಮಡಿಕೇರಿ, ಜೂ.11: ಕರ್ನಾಟಕ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ನ ವೀಣಾ ಅಚ್ಚಯ್ಯ ಅವರು ಜೂ.13ರಂದು ಬೆಳಗ್ಗೆ ಕೊಡಗು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ.

ಅಂದು ಬೆಳಗ್ಗೆ 10:30ಕ್ಕೆ ಕುಶಾಲನಗರ, 11:30ಕ್ಕೆ ಸುಂಟಿಕೊಪ್ಪ ಹಾಗೂ ಮಧ್ಯಾಹ್ನ 12 ಗಂಟೆಗೆ ಮಡಿಕೇರಿಯ ಸುದರ್ಶನ ವೃತ್ತದ ಬಳಿ ಭವ್ಯ ಸ್ವಾಗತವನ್ನು ಕಾಂಗ್ರೆಸ್ ಕಾರ್ಯಕರ್ತರು ನೀಡಲಿದ್ದಾರೆ.

ನಂತರ ಅವರು ಮಧ್ಯಾಹ್ನ 12:30ಕ್ಕೆ ಮಡಿಕೇರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಪಕ್ಷದ ಪದಾಧಿಕಾರಿಗಳನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಲಿದ್ದಾರೆ. ಪಕ್ಷದ ಎಲ್ಲ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮತ್ತು ಜಿಲ್ಲೆಗೆ ಆಗಮಿಸುತ್ತಿರುವ ವೀಣಾ ಅಚ್ಚಯ್ಯ ಅವರಿಗೆ ಅದ್ದೂರಿ ಸ್ವಾಗತ ಕೋರುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ.ರಮೇಶ್ ಮನವಿ ಮಾಡಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News