×
Ad

ಕೊಣಾಜೆ: ಅರ್ಕಾಣ ಶಾಲೆಯಲ್ಲಿ ಉಚಿತ ಶೂ ಹಾಗೂ ಪುಸ್ತಕ ವಿತರಣೆ

Update: 2016-06-11 23:35 IST

ಕೊಣಾಜೆ, ಜೂ.11: ಪಜೀರು ಗ್ರಾಮದ ಅರ್ಕಾಣ ದ.ಕ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶೂ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮವು ಶುಕ್ರವಾರ ನಡೆಯಿತು.

ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಡಿ.ಎಸ್.ಗಟ್ಟಿ ವಿದ್ಯಾರ್ಥಿಗಳಿಗೆ ಉಚಿತ ಶೂ ಹಾಗೂ ಪುಸ್ತಕವನ್ನು ವಿತರಿಸಿದರು. ಬಳಿಕ ಮಾತನಾಡಿದ ಅವರು ಇಂದು ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸರಕಾರವು ಹಲವಾರು ಸೌಲಭ್ಯಗಳನ್ನು ಒದಗಿಸಿಕೊಡುತ್ತಿದ್ದು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದು ಉತ್ತಮ ಶಿಕ್ಷಣವನ್ನು ಪಡೆಯುವುದರೊಂದಿಗೆ ಆದರ್ಶ ಪ್ರಜೆಯಾಗಿ ರೂಪುಗೊಳ್ಳಬೇಕು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಪಜೀರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಶೆಟ್ಟಿ ವಹಿಸಿದ್ದರು. ಪಂಚಾಯತ್ ಸದಸ್ಯರಾದ ಇಮ್ತಿಯಾಝ್, ಮೊಯ್ದೀನ್, ಸುಜಾತ, ಶಾಲಾಭಿವೃದ್ದಿ ಸದಸ್ಯರಾದ ಹಮೀದ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಸತ್ಯನಾರಾಯಣ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News