ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ: ದ.ಕ. ಡಿಸಿಗೆ ಅಭಿನಂದನೆ
Update: 2016-06-11 23:35 IST
ಮಂಗೂರು, ಜೂ.11: ದ.ಕ. ಜಿಲ್ಲೆಯಲ್ಲಿ 2015-16ನೆ ಸಾಲಿನಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ವಿಶೇಷ ಆಸಕ್ತಿ ವಹಿಸಿ ಕೈಗೊಂಡ ಕ್ರಮಗಳಿಗಾಗಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಸರಕಾರದ ಅಭಿನಂದನೆಗೆ ಪಾತ್ರರಾಗಿದ್ದಾರೆ.
ಜೂ.12ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ನಡೆಯಲಿರುವ ರಾಜ್ಯಮಟ್ಟದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಸಂದರ್ಭದಲ್ಲಿ ಎ.ಬಿ.ಇಬ್ರಾಹೀಂರನ್ನು ಅಭಿನಂದಿಸಲಾಗುವುದು ಎಂದು ಕಾರ್ಮಿಕ ಇಲಾಖೆಯ ಪ್ರಕಟನೆೆ ತಿಳಿಸಿದೆ.