×
Ad

ನಾರಾಯಣ ಗುರು ಸಮುದಾಯ ಭವನ ಉದ್ಘಾಟನೆ

Update: 2016-06-12 00:01 IST

ಉಡುಪಿ, ಜೂ.11: ಅಂಬಲಪಾಡಿ ಶ್ರೀವಿಠೋಬ ಭಜನಾ ಮಂದಿರ ಬಿಲ್ಲವ ಸೇವಾ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ನಾರಾಯಣಗುರು ಸಮುದಾಯ ಭವನದ ಉದ್ಘಾಟನೆ ಶನಿವಾರ ಜರಗಿತು.

ಅಂಬಲಪಾಡಿ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಸಮುದಾಯ ಭವನವನ್ನು ಉದ್ಘಾಟಿಸಿದರು. ಕಾರ್ಕಳ ಬೊಲ್ಲೊಟ್ಟು ಶ್ರೀಗುರುಕೃಪಾ ಸೇವಾಶ್ರಮದ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಗೋಪಾಲ್ ಸಿ.ಬಂಗೇರ ವಹಿಸಿದ್ದರು.

ಈ ಸಂದರ್ಭ ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಹಾಗೂ ಉಡುಪಿ ತಾಪಂ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ತಲ್ಲೂರು ಶಿವರಾಮ ಶೆಟ್ಟಿ, ಕಲ್ಮಾಡಿ ಶ್ರೀಬ್ರಹ್ಮಬೈದೇರುಗಳ ಗರೋಡಿ ಅಧ್ಯಕ್ಷ ಪ್ರಕಾಶ್ ಕರ್ಕೇರ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲೂಕು ಮಾಲತಿ ದಿನೇಶ್ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಎ.ಶಿವಕುಮಾರ್ ಸ್ವಾಗತಿಸಿದರು. ದಯಾನಂದ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News