ಬಸ್-ಕಾರು ಢಿಕ್ಕಿ: ಓರ್ವ ಮೃತ್ಯು
ಮೂಡಿಗೆರೆ, ಜೂ.13: ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತ ಪಟ್ಟು, 5 ಮಂದಿ ಗಾಯಗೊಂಡಿರುವ ಘಟನೆ ಕೊಲ್ಲೀಬೈಲ್ ಸಮೀಪ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಮಗಳೂರಿನ ಲಿಂಗೇಗೌಡ(63)ಮೃತ ವ್ಯಕ್ತಿ. ಚಂದ್ರೇಗೌಡ(70), ರತ್ಮಮ್ಮ(68), ಪಾರ್ವತಮ್ಮ(50), ಯಶೋಧಾ(57), ಶಶಿಕಲಾ(22) ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹರಪನಹಳ್ಳಿಯಿಂದ ಮೂಡಿಗೆರೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ಸು ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜ್ಜಾಗಿದೆ. ಘಟನೆಗೆ ಬಸ್ ಅತಿಯಾದ ವೇಗ ಮತ್ತು ಅಜಾಗರೂಕತೆಯೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಘಟನೆ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ