×
Ad

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Update: 2016-06-13 23:24 IST

ಶಿವಮೊಗ್ಗ, ಜೂ.13: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2016-17ನೆ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ(National Overseas Scholarship)ಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

www.gokdom.kar.nic.in Directorate of Minorities, 20th Floor, V.V.Towers, Bangalore ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆಯ ಅರ್ಜಿಗಳನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಿಸಿದ ದಾಖಲೆಗಳೊಂದಿಗೆ ಜುಲೈ 15ರೊಳಗಾಗಿ 560001.ಇಲ್ಲಿಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಧರ್ಮಪ್ಪ. ಟಿ. ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಗರದ ಎಲ್.ಎಲ್.ಆರ್. ರಸ್ತೆಯಲ್ಲಿರುವ ಸಿ.ಎಸ್. ಆಸ್ಪತ್ರೆ ಕಟ್ಟಡದ 1ನೆ ಮಹಡಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣಇಲಾಖೆ ದೂ. ಸಂ: 08182-220206ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News