×
Ad

ಭಾರತೀಯ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಕುಂಬ್ಳೆ ಅರ್ಜಿ

Update: 2016-06-13 23:46 IST

ಹೊಸದಿಲ್ಲಿ, ಜೂ.13: ಭಾರತದ ಮಾಜಿ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಭಾರತೀಯ ಕ್ರಿಕೆಟ್ ತಂಡದಲ್ಲಿ ತೆರವಾಗಿರುವ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಆಂಗ್ಲಪತ್ರಿಕೆಯೊಂದು ವರದಿ ಮಾಡಿದೆ..

ಕೋಚ್ ಹುದ್ದೆಗೆ ಭಾರತ ಹಾಗೂ ವಿದೇಶದಿಂದ ಒಟ್ಟು 57 ಅರ್ಜಿಗಳನ್ನು ಸ್ವೀಕರಿಸಿದ್ದೇವೆ ಎಂದು ಬಿಸಿಸಿಐ ಘೋಷಿಸಿದ ಮರುದಿನವೇ ಈ ವಿಷಯ ಬಹಿರಂಗವಾಗಿದೆ.

ಟೆಸ್ಟ್ ಹಾಗೂ ಏಕದಿನದಲ್ಲಿ ಭಾರತದ ಪರ ಗರಿಷ್ಠ ವಿಕೆಟ್‌ಗಳನ್ನು ಪಡೆದಿರುವ ಕುಂಬ್ಳೆ ಈ ಹಿಂದೆ ಬಿಸಿಸಿಐನ ತಾಂತ್ರಿಕ ಸಮಿತಿಯ ಅಧ್ಯಕ್ಷರಾಗಿದ್ದರು. 45ರ ಹರೆಯದ ಕುಂಬ್ಳೆ ಪ್ರಸ್ತುತ ಐಸಿಸಿ ಕ್ರಿಕೆಟ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News