×
Ad

ಕಾವಲುಪಡೆ ವತಿಯಿಂದ ಪುಸ್ತಕ ವಿತರಣೆ

Update: 2016-06-14 23:17 IST

ಕುಶಾಲನಗರ, ಜೂ. 14: ಇಲ್ಲಿನ ಸಮೀಪದ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ದೊಡ್ಡಹೊಸೂರು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಕಾವಲು ಪಡೆ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಪುಸ್ತಕ-ಪರಿಕರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಎಂ. ಕೃಷ್ಣ, ಪೋಷಕರು ಮಕ್ಕಳನ್ನು ಸರಕಾರಿ ಶಾಲೆಯಲ್ಲಿ ಓದಿಸಬೇಕು, ಉತ್ತಮ ಶಿಕ್ಷಣ ಸರಕಾರಿ ಶಾಲೆಯಲ್ಲಿಯೂ ನೀಡುತ್ತಿದ್ದು, ಸರಕಾರ ಮನಗಂಡಂತೆ ಸರಕಾರಿ ಶಾಲೆಗಳಲ್ಲೂ ಎಲ್‌ಕೆಜಿ, ಯುಕೆಜಿ ಆರಂಭವಾದರೆ ಎಲ್ಲ ಪೋಷಕರು ಖಾಸಗಿ ಶಾಲೆಗಳಿಗೆ ಸೇರಿಸುವ ಬದಲು ಸರಕಾರಿ ಶಾಲೆಗೆ ಸೇರಿಸುತ್ತಾರೆ. ಸರಕಾರಿ ಶಾಲೆಗಳಿಗೆ ಬೀಗ ಹಾಕುವ ಬದಲು ಇಂತಹ ಯೋಜನೆಗಳನ್ನು ಮಾಡಿದರೆ ಸರಕಾರಿ ಶಾಲೆಗಳು ಯಾವುದೇ ಆತಂಕವಿಲ್ಲದೆ ನಡೆಯುತ್ತವೆೆ. ಅಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೇರಿಸಲಾಗದ ಕೂಲಿ ಕೆಲಸ ಮಾಡುವ ತಂದೆ-ತಾಯಿಗಳು ತಮ್ಮ ಮಕ್ಕಳಿಗೆ ಸರಕಾರಿ ಶಾಲೆಯಿಂದ ಉತ್ತಮ ಶಿಕ್ಷಣ ಸಿಗುತ್ತದೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶಾಲೆಯ ಮುಖ್ಯಶಿಕ್ಷಕ ಗೋವಿಂದರಾಜ್ ಮಾತನಾಡಿ, ನಮ್ಮ ಶಾಲೆಯಲ್ಲಿ ಹೆಚ್ಚು ಬಡವಿದ್ಯಾರ್ಥಿಗಳಿದ್ದು ಅವರಿಗೆ ಶಿಕ್ಷಣವನ್ನು ನೀಡುವ ಸಲುವಾಗಿ ಕರ್ನಾಟಕ ಕಾವಲು ಪಡೆ ವತಿಯಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತೋಷದ ವಿಷಯವೆಂದರು.

ಸಮಾರಂಭದಲ್ಲಿ ಕರ್ನಾಟಕ ಕಾವಲು ಪಡೆ ಜಿಲ್ಲಾ ಕಾರ್ಯದರ್ಶಿ ಕುಮಾರ್, ಜಿಲ್ಲಾ ಸಂಚಾಲಕ ಸುಬ್ರಮಣಿ, ಉಪಾಧ್ಯಕ್ಷ ರಂಗಸ್ವಾಮಿ, ಸದಸ್ಯ ಬಾಬು, ಶಾಲಾ ಶಿಕ್ಷಕ ವೃಂದದವರಾದ ಮಂಜುಳಾ, ಚಂದ್ರಿಕಾ, ಮಂಜು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News