ಬಂಟ್ವಾಳ: ಸರಕಾರಿ ಶಾಲೆಗೆ ವಾಹನ ಕೊಡುಗೆ
Update: 2016-06-14 23:28 IST
ಬಂಟ್ವಾಳ ತಾಲೂಕಿನ ನಡುಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮುಂಬೈ ಉದ್ಯಮಿ ಕುಸುಮಾಧರ ಶೆಟ್ಟಿ ಕೊಡುಗೆ ನೀಡಿದ ಉಚಿತ ಶಾಲಾ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ರವಿವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಮಿತಿ ಅಧ್ಯಕ್ಷ ಕೆ.ಎನ್.ಶಿವರಾಮ ಶೆಟ್ಟಿ ನಡುಮೊಗರುಗುತ್ತು, ಜಿಪಂ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಬೂಡ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಮುಖ್ಯಶಿಕ್ಷಕ ಚಂದ್ರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ ಗೌಡ ಮತ್ತಿತರರು ಇದ್ದರು.