×
Ad

ಯೆನೆಪೊಯ ಇಂಜಿನಿಯರಿಂಗ್ ಕಾಲೇಜು: ಶುಲ್ಕರಹಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Update: 2016-06-15 15:26 IST

ಮಂಗಳೂರು, ಜೂ.15: ಯೆನೆಪೊಯ ಮೊದೀನ್ ಕುಂಞಿ ಮೆಮೋರಿಯಲ್ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಯೆನೆಪೊಯ ಸಂಸ್ಥೆಯು ಮೂಡುಬಿದಿರೆಯಲ್ಲಿರುವ ಯೆನೆಪೊಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ 2016- 17ನೆ ಸಾಲಿನಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಬಯಸುವ ಕೆಲವು ಅಭ್ಯರ್ಥಿಗಳಿಗೆ ಶುಲ್ಕರಹಿತ ಶಿಕ್ಷಣವನ್ನು ನೀಡಲು ನಿರ್ಧರಿಸಿದೆ.

ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯು ಮೆರಿಟ್ ಆಧಾರಿತವಾಗಿರುತ್ತದೆ. ಅರ್ಹತಾ ಪರೀಕ್ಷೆಯ ಅಂಕಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಅರ್ಹ ಅಭ್ಯರ್ಥಿಗಳಿಗೆ ಮಾತ್ರ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ.

ಅರ್ಹತಾ ಪರೀಕ್ಷೆಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ ವಿಷಯಗಳಲ್ಲಿ ಪ್ರತಿಶತ 80 ಅಥವಾ ಅಧಿಕ ಅಂಕಗಳನ್ನು ಪಡೆದ ಕರ್ನಾಟಕ ರಾಜ್ಯದ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಅರ್ಜಿ ಹಾಕಲು ಅರ್ಹರಾಗಿರುತ್ತಾರೆ. ಮುಸ್ಲಿಂ ಅಭ್ಯರ್ಥಿಗಳಿಗೆ ಆದ್ಯತೆಯನ್ನು ನೀಡಲಾಗುತ್ತದೆ.

ಆಸಕ್ತ ವಿದ್ಯಾರ್ಥಿಗಳು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಂದ ಪ್ರಮಾಣಿಕೃತವಾದ ಅಂಕಪಟ್ಟಿ ಪ್ರತಿಯೊಂದಿಗೆ ಮತ್ತು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಅರ್ಜಿಯನ್ನು ಪ್ರಾಂಶುಪಾರು, ಯೆನೆಪೊಯ ತಾಂತ್ರಿಕ ಮಹಾವಿದ್ಯಾಲಯ, ಮಿಜಾರು ಪೋಸ್ಟ್, ತೋಡಾರು, ಮೂಡುಬಿದಿರೆ, ಮಂಗಳೂರು ತಾಲೂಕು-574225 ವಿಳಾಸಕ್ಕೆ ಜೂ.25 ರೊಳಗೆ ಕಳುಹಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News